ಹಾಸನ

ಹಾಸನ| ರಸ್ತೆಯಲ್ಲಿ ಸಿಕ್ಕ ಚಿನ್ನದ ಸರ: ವಾರಸುದಾರರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಬಸ್‌ ಚಾಲಕ

ಹಾಸನ: ಕೆಎಸ್‌ಆರ್‌ಟಿಸಿ ಬಸ್‌ ಚಾಲಕರೊಬ್ಬರು ತಮಗೆ ರಸ್ತೆಯಲ್ಲಿ ಸಿಕ್ಕ ಚಿನ್ನದ ಸರವನ್ನು ವಾರಸುದಾರರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ.

ಕೆಎಸ್‌ಆರ್‌ಟಿಸಿ ಬಸ್‌ ಚಾಲಕ ಧರ್ಮ ಎಂಬುವವರಿಗೆ ರಸ್ತೆಯಲ್ಲಿ 38 ಗ್ರಾಂ ಚಿನ್ನದ ಮಾಂಗಲ್ಯ ಸರ ಸಿಕ್ಕಿತು. ಧರ್ಮ ಅವರು ಕರ್ತವ್ಯ ನಿರ್ವಹಿಸಿ ಮನೆಗೆ ತೆರಳುತ್ತಿದ್ದಾಗ ಹಾಸನದ ಚಿಟ್ಟನಹಳ್ಳಿ ಬಡಾವಣೆಯಲ್ಲಿರುವ ನರ್ಸಿಂಗ್‌ ಕಾಲೇಜು ರಸ್ತೆಯಲ್ಲಿ ಚಿನ್ನದ ಮಾಂಗಲ್ಯ ಸರ ಸಿಕ್ಕಿತ್ತು.

ಅದನ್ನು ತೆಗೆದುಕೊಂಡು ಬಂದಿದ್ದರು. ಕೆಲ ಸಮಯದ ಬಳಿಕ ಅದೇ ರಸ್ತೆಯಲ್ಲಿ ಸರ ಕಳೆದುಕೊಂಡಿದ್ದ ಮಹಿಳೆ ಹಾಗೂ ಕುಟುಂಬದವರು ಸರ ಹುಡುಕುತ್ತಿರುವುದನನು ಗಮನಿಸಿದ್ದರು.

ಈ ಬಗ್ಗೆ ಧರ್ಮ ಅವರು ಸ್ಥಳಕ್ಕಾಗಮಿಸಿ ಮಹಿಳೆ ಹಾಗೂ ಕುಟುಂಬದವರನ್ನು ವಿಚಾರಿಸಿದ್ದಾರೆ. ಕಳೆದುಕೊಂಡ ಸರ ಹಾಗೂ ಒಡವೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ತನಗೆ ಸಿಕ್ಕಿರುವ ಸರ ಅವರದ್ದು ಎಂಬ ಬಗ್ಗೆ ಸೂಕ್ತ ಮಾಹಿತಿ ಪಡೆದು ಕೆಎಂಎಫ್‌ ಘಟಕವೊಂದರ ವ್ಯವಸ್ಥಾಪಕ ದಿನೇಶ್‌ ಅವರ ಸಮ್ಮುಖದಲ್ಲಿ ಮಹಿಳೆಗೆ ಸರ ಹಸ್ತಾಂತರಿಸಿದ್ದಾರೆ.

ಬಸ್‌ ಚಾಲಕನ ಪ್ರಾಮಾಣಿಕತೆ ಮಹಿಳೆಯ ಕುಟುಂಬ ಹಾಗೂ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

3 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

3 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

3 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

3 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

3 hours ago