Mysore
22
overcast clouds

Social Media

ಸೋಮವಾರ, 23 ಡಿಸೆಂಬರ್ 2024
Light
Dark

ಕಾಫಿ ಬೆಳೆಗಾರರಿಗೆ ಗುಡ್‌ನ್ಯೂಸ್‌ ನೀಡಿದ ಕೇಂದ್ರ ಸಚಿವ ಎಚ್‌ಡಿಕೆ

ಹಾಸನ/ಸಕಲೇಶಪುರ: ಕೇಂದ್ರ ಸರ್ಕಾರದ ನೆರವಿನೊಂದಿಗೆ ಕಾಫಿ ಬೆಳೆಗಾರರಿಗೆ ಪರಿಹಾರಗಳನ್ನು ಒದಗಿಸಲಾಗುವುದು ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಆಶ್ವಾಸನೆ ನೀಡಿದ್ದಾರೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ಇಂದು(ಡಿಸೆಂಬರ್‌.23) ಆಯೋಜಿಸಲಾಗಿದ್ದ ಕಾಫಿ ಬೆಳೆಗಾರರ ಸಮಾವೇಶದಲ್ಲಿ ಮಾತನಾಡಿದ ಅವರು, ಹಿಂದೆ ಮಲೆನಾಡಿನ ಕಾಫಿ ಬೆಳೆಗಾರರಿಗೆ 300 ಕೋಟಿ ರೂ. ವಿದರ್ಭ ಮಾದರಿ ಪ್ಯಾಕೇಜ್‌ ನೀಡಿದ್ದು, ಪ್ರಸ್ತುತ ರಾಜ್ಯದ ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿ, ಕೇಂದ್ರ ಸರ್ಕಾರದ ನೆರವಿನೊಂದಿಗೆ ಪರಿಹಾರಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಂಕಷ್ಟಗಳ ಬಗ್ಗೆ ಇಂದು ಮಹತ್ವಪೂರ್ಣ ಸಂವಾದ ನಡೆಸಲಾಯಿತು. ಅಲ್ಲದೇ  ಕೇಂದ್ರ ಸಚಿವ ಪಿಯೂಷ್‌ ಗೋಯಲ್ ಅವರು ರಾಜ್ಯದ ಕಾಫಿ ಬೆಳೆಗಾರರ ಸಂಕಷ್ಟ ನಿವಾರಣೆ ನಿಟ್ಟಿನಲ್ಲಿ ಸ್ಪಷ್ಟ ಭರವಸೆ ನೀಡಿದ್ದು ನನಗೆ ಬಹಳ ಸಂತೋಷವನ್ನುಂಟು ಮಾಡಿದೆ ಎಂದು ಹೇಳಿದ್ದಾರೆ.

Tags: