ಹಾಸನ: ಈ ಜಿಲ್ಲೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ನೀಡಿದ ಕೊಡುಗೆ ಏನು ಎಂದು ಕೇಳಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ, ಹಾಸನ ಜಿಲ್ಲೆಗೆ ಕಾಂಗ್ರೆಸ್ ಕೊಡುಗೆ ಏನೆಂದು ಪ್ರಶ್ನಿಸಿ
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಇಂದು(ಡಿಸೆಂಬರ್.23) ತಮ್ಮ ಹುಟ್ಟುರಾದ ಹರದನಹಳ್ಳಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗಳಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಹಾಸನ ಜಿಲ್ಲೆಗೆ ಕಾಂಗ್ರೆಸ್ ನಾಯಕರ ಕೊಡುಗೆ ಏನೆಂಬುದು ನನಗೆ ಗೊತ್ತಿದೆ. ಈ ಜಿಲ್ಲೆಗೆ ಕಾಂಗ್ರೆಸ್ ಸಿಡಿ ಬಿಟ್ಟಿರೋದೇ ಕೊಡುಗೆ. ಅದನ್ನು ಬಿಟ್ಟು ಹಾಸನ ಜಿಲ್ಲೆಗೆ ಅವರು ಏನು ಕೊಟ್ಟಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.
ಇಂದಿನವರೆಗೂ ಹಾಸನ ಜಿಲ್ಲೆ ಅಭಿವೃದ್ಧಿ ಕಂಡಿದ್ದರೆ ಅದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ರೇವಣ್ಣ ಹಾಗೂ ನಾನು ಮುಖ್ಯಮಂತ್ರಿ ಇದ್ದಾಗ ಆಗಿದ್ದು ಅಷ್ಟೇ. ನಾನು ನನ್ನದೇ ಆದಂತಹ ಜವಾಬ್ದಾರಿ ನಿರ್ವಹಣೆ ಮಾಡಿದ್ದೇನೆ. ಇವರೇನು ಕೊಟ್ಟಿದ್ದಾರೆ? ಹಾಸನದ ಫ್ಲೈ ಓವರ್ ರೆಡಿ ಮಾಡಲು ಆಗಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಸರ್ಕಾರದವರು ಅವರು ಸಾರ್ವಜನಿಕರ ಆಸ್ತಿ, ಸರ್ಕಾರದ ಆಸ್ತಿ, ಪ್ರಕೃತಿಯನ್ನು ಲೂಟಿ ಹೊಡೆದಿರುವುದಕ್ಕೆ ಸಾಕ್ಷಿ ಇದೆ. ಅವರ ಹಾಗೇ ನಾವೇನಾದರೂ ಸಾರ್ವಜನಿಕ ಸಂಪತ್ತನ್ನು ಲೂಟಿ ಮಾಡಿ ಸಾಕ್ಷಿಗುಡ್ಡೆಗಳನ್ನು ನಿರ್ಮಾಣ ಮಾಡಿದರೆ ತೋರಿಸಬಹುದಿತ್ತು. ಆದರೆ ನಾವು ಅಂತಹ ಕೆಲಸಗಳನ್ನು ಮಾಡಿಲ್ಲ. ಹೀಗಾಗಿ ನಾವು ಎಲ್ಲಿಂದ ತರೋದು ಸಾಕ್ಷಿ ಗುಡ್ಡೆನಾ? ಎಂದು ಕಿಡಿಕಾರಿದ್ದಾರೆ.
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ ವಿಜಯಲಕ್ಷ್ಮೀ ದರ್ಶನ್ ಅವರು ನಾಡಿನ…
ನವದೆಹಲಿ: ಇನ್ನು ಮುಂದೆ ಐದು ಹಾಗೂ ಎಂಟನೇ ತರಗತಿಗಳಲ್ಲೂ ವಿದ್ಯಾರ್ಥಿಗಳನ್ನು ಫೇಲ್ ಮಾಡಬಹುದು ಎಂಬ ಹೊಸ ತಿದ್ದುಪಡಿಯನ್ನು ಕೇಂದ್ರ ಸರ್ಕಾರ…
ಮೈಸೂರು: ಸಿ.ಟಿ.ರವಿ ತಪ್ಪು ಮಾಡಿದ್ದರೆ ಸಭಾಪತಿಗಳು ಶಿಕ್ಷೆಯ ಬಗ್ಗೆ ತೀರ್ಮಾನ ಮಾಡಬೇಕು. ಆದರೆ ರಾಜ್ಯದಲ್ಲಿ ಆ ದಿನ ಸಿ.ಟಿ.ರವಿ ಅವರನ್ನು…
ಥಾಣೆ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಮಹಾರಾಷ್ಟ್ರದ ಥಾಣೆಯ ಖಾಸಗಿ ಆಸ್ಪತ್ರೆಗೆ…
ಬೆಂಗಳೂರು: ರಾಜ್ಯದಲ್ಲಿ ಬಾಣಂತಿಯರು ಸರಣಿ ಸಾವನ್ನಪ್ಪುತ್ತಿದ್ದು, ಕೂಡಲೇ ರಾಜ್ಯ ಸರ್ಕಾರ ಉನ್ನತ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ…
ಮೈಸೂರು: ಸರ್ಕಾರ ರೈತರಿಗೆ ಬರುತ್ತಿದ್ದ ಹಲವಾರು ಯೋಜನೆಗಳನ್ನು ನಿಲ್ಲಿಸಿದೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ರಾಜ್ಯ ಸರ್ಕಾರದ ವಿರುದ್ಧ…