ಹಾಸನ

ಪೂಜಾ ಕೈಂಕರ್ಯಗಳೊಂದಿಗೆ ಹಾಸನಾಂಬೆ ಗರ್ಭಗುಡಿ ಓಪನ್

ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ದೇವಿ ಗರ್ಭಗುಡಿಯ ಬಾಗಿಲನ್ನು ಇಂದು ತೆರೆಯಲಾಗಿದೆ.

ಇಂದು ಮಂಗಳವಾದ್ಯಗಳೊಂದಿಗೆ ಪೂಜಾ ಸಾಮಗ್ರಿಗಳ ಜೊತೆ ಪ್ರಧಾನ ಅರ್ಚಕ ನಾಗರಾಜ್‌ ನೇತೃತ್ವದಲ್ಲಿ ಬಾಗಿಲನ್ನು ತೆರೆಯಲಾಯಿತು. ಗರ್ಭಗುಡಿ ಬಾಗಿಲು ತೆರೆಯುವ ಮೊದಲು ಬಾಗಿಲಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಹಾಸನಾಂಬೆ ದೇವಿಯ ಗರ್ಭಗುಡಿ ಬಾಗಿಲನ್ನು ಮಧ್ಯಾಹ್ನ 12.10ಕ್ಕೆ ತೆರೆಯಲಾಯಿತು. ಅರಸು ವಂಶಸ್ಥ ನಂಜರಾಜೇ ಅರಸ್‌ ಅವರು ಗೊನೆ ಇರುವ ಬಾಳೆಗೊನೆ ಕಡಿದ ಬಳಿಕ ಗರ್ಭಗುಡಿಯ ಬಾಗಿಲನ್ನು ತೆರೆಯಲಾಯಿತು.

ಅಲ್ಲಿ ಕಳೆದ ವರ್ಷ ಗರ್ಭಗುಡಿ ಮುಚ್ಚುವ ವೇಳೆ ಹಚ್ಚಿದ್ದ ದೀಪ ಉರಿಯುತ್ತಿತ್ತು. ಇನ್ನು ದೇವರಿಗೆ ಇಟ್ಟಿದ್ದ ಹೂವು ಕೂಡ ಬಾಡಿರಲಿಲ್ಲ. ಹಾಗೆಯೇ ದೇವರಿಗೆ ಇಟ್ಟಿದ್ದ ನೈವೇದ್ಯ ಕೂಡ ಹಳಸಿರಲಿಲ್ಲ.

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಸಂಸದ ಶ್ರೇಯಸ್‌ ಪಟೇಲ್‌, ಶಾಸಕರಾದ ಸ್ವರೂಪ್‌ ಪಟೇಲ್‌, ಶಿವಲಿಂಗೇಗೌಡ, ಜಿಲ್ಲಾಧಿಕಾರಿ ಸತ್ಯಭಾಮಾ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಬಾರಿ ದಿನದ 24 ಗಂಟೆಯೂ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಸಾರ್ವಜನಿಕರ ದರ್ಶನಕ್ಕೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ.

ನವೆಂಬರ್.3ರವರೆಗೂ ಹಾಸನಾಂಬ ಜಾತ್ರಾ ಮಹೋತ್ಸವ ಜರುಗಲಿದ್ದು, ಇಂದು ಹಾಗೂ ಕೊನೆಯ ದಿನ ದೇವಿಯ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಉಳಿದ 9 ದಿನಗಳ ಕಾಲ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ನೆರಳಿನಂತಿದ್ದ ಕಸ್ತೂರ ಬಾ

ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ…

17 mins ago

ಗಾಂಧಿ ಅಭಿಯಾನ ಅರಿವಿನ ಯಾನ | ಗೊಂದಲಗೊಳಿಸುತಿದ್ದ ಹಲವು ಸಂದೇಹಗಳು

ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…

1 hour ago

ಯುಪಿಯಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್‌ ಕ್ಷಿಪಣಿಗಳು ಪಾಕ್‌ ನಿದ್ದೆಗೆಡಿಸಿವೆ: ಅಮಿತ್‌ ಶಾ

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.…

20 hours ago

ಪ್ರಜಾಪ್ರಭುತ್ವ ರಕ್ಷಿಸಲು ಗಾಂಧಿ ಜಯಂತಿಯಂದು ಪ್ರತಿಜ್ಞೆ ಮಾಡೋಣ: ಅಭಿಜಿತ್‌ ದೀಪ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…

20 hours ago

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆ

ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…

21 hours ago

ಜನರೊಂದಿಗೆ ಬೆರೆಯುವುದು ಅದ್ಭುತ ಅನುಭವ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…

21 hours ago