ಹಾಸನ: ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ವಿಐಪಿಗಳಿಗೆ ಎರಡೇ ದಿನ ಅವಕಾಶ ಕೊಡಿ ಎಂದು ಜನಸಾಮಾನ್ಯರ ಆಗ್ರಹವಾಗಿದೆ.
ಈ ಬಾರಿ ಅಕ್ಟೋಬರ್.24 ರಿಂದ ನವೆಂಬರ್.3ರವರೆಗೂ ಹಾಸನಾಂಬೆ ದರ್ಶನಕ್ಕೆ ಅವಕಾಶವಿದ್ದು, ಹಿಂದಿನ ವರ್ಷಗಳ ಸಮಸ್ಯೆ ಪುನರಾವರ್ತನೆ ಆಗದಂತೆ ನೋಡಿಕೊಳ್ಳಬೇಕು ಎಂಬ ಆಗ್ರಹ ಕೇಳಿಬರುತ್ತಿದೆ.
ಹಾಸನಾಂಬೆ ದರ್ಶನಕ್ಕೆ ಮೊದಲು ಜನಸಾಮಾನ್ಯರಿಗೆ ಆದ್ಯತೆ ಸಿಗುವಂತಾಗಬೇಕು. ತದನಂತರದಲ್ಲಿ ವಿಐಪಿಗಳಿಗೆ ಅವಕಾಶ ಮಾಡಿಕೊಡಿ ಎಂದು ಆಗ್ರಹಿಸಲಾಗುತ್ತಿದೆ.
ಹಾಸನಾಂಬೆ ಗರ್ಭಗುಡಿಯ ಪ್ರವೇಶ ಕೇವಲ ವಿಐಪಿಗಳಿಗೆ ಸೀಮಿತವಾಗಿದ್ದು, ಸಾಮಾನ್ಯ ಭಕ್ತರು ಗಂಟೆಗಟ್ಟಲೇ ಸರತಿ ಸಾಲಿನಲ್ಲಿ ನಿಂತು ದೇವರೆದುರು ಬರುವಷ್ಟರಲ್ಲಿ ಎಳೆದು ಮುಂದೆ ಕಳುಹಿಸುತ್ತಾರೆ.
ಆದ್ದರಿಂದ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಇದರ ಜೊತೆಗೆ ದೇವಿಯ ಕುಂಕುಮ ಹಾಗೂ ಹೂವನ್ನು ಧರಿಸಿಕೊಳ್ಳುವುದು ಹಿಂದುಗಳ ಸಂಪ್ರದಾಯ. ಹಾಗಾಗಿ ಇದರ ವಿತರಣೆಗೆ ಈ ವರ್ಷದಿಂದ ವ್ಯವಸ್ಥೆ ಮಾಡಿಕೊಡಿ ಎಂದು ಮನವಿ ಮಾಡಲಾಗಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…