ಹಾಸನ : ಪ್ರಸಿದ್ಧ ಶ್ರೀ ಹಾಸನಾಂಬ ದೇವಾಲಯದ ಬಾಗಿಲು ಈ ಬಾರಿ ಅಕ್ಟೋಬರ್ ೨೪ ರಂದು ತೆರೆಯಲಾಗುತ್ತಿದ್ದು, ನವೆಂಬರ್ ೩ ರಂದು ೯ ದಿನಗಳ ದರ್ಶನ ಅಂತ್ಯಗೊಳ್ಳಲಿದೆ. ಇನ್ನು ಈಗಾಗಲೇ ಜಾತ್ರಾ ಮಹೋತ್ಸವಕ್ಕೆ ಬೇಕಾದ ಸಿದ್ಧತೆಗಳನ್ನ ಜಿಲ್ಲಾಡಳಿತ ಕೂಡ ಮಾಡಿಕೊಳ್ಳುತ್ತಿದೆ.
ಈ ಸಂಬಂಧವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಾಸನಾಂಬ ಜಾತ್ರಾ ಮಹೋತ್ಸವದ ಪೂರ್ವ ಸಿದ್ಧತಾ ಸಭೆ ನಡೆಸಲಾಗಿದ್ದು, ಕಳೆದ ಬಾರಿ ಕಂಡು ಬಂದ ಲೋಪದೋಷಗಳನ್ನ ಸರಿಪಡಿಸಿಕೊಂಡು ಜಾತ್ರೆಗೆ ಬೇಕಾದ ಅಗತ್ಯ ಸಿದ್ದತೆಗೆ ಕ್ರಮಕೈಗೊಳ್ಳುವಂತೆ ಡಿಸಿ ಸತ್ಯಭಾಮ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇನ್ನು ಸಾರ್ವಜನಿಕರಿಗೆ ದೇವಿ ದರ್ಶನಕ್ಕೆ ೯ ದಿನಗಳು ಮಾತ್ರ ಅವಕಾಶವಿರುತ್ತದೆ. ಭಕ್ತಾಧಿಗಳಿಗೆ ದೇವಿ ದರ್ಶನ ಪಡೆಯಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜೊತೆಗೆ ಕುಡಿಯುವ ನೀರು, ವಿದ್ಯುತ್ ದೀಪಾಲಂಕಾರ ಹೂವಿನ ಅಲಂಕಾರ, ಲಡ್ಡು ಪ್ರಸಾದ, ದೊನ್ನೆ ಪ್ರಸಾದ ಮತ್ತೀತರ ಅಗತ್ಯ ಸಿದ್ಧತೆಗಾಗಿ ಒಂದು ವಾರದೊಳಗೆ ಟೆಂಡರ್ ಕರೆಯುವಂತೆ