ಹಾಸನ

ಅಕ್ಟೋಬರ್ ೨೪ ರಂದು ಹಾಸನಾಂಬ ದೇವಾಲಯ ಓಪನ್

ಹಾಸನ : ಪ್ರಸಿದ್ಧ ಶ್ರೀ ಹಾಸನಾಂಬ ದೇವಾಲಯದ ಬಾಗಿಲು ಈ ಬಾರಿ ಅಕ್ಟೋಬರ್‌ ೨೪ ರಂದು ತೆರೆಯಲಾಗುತ್ತಿದ್ದು, ನವೆಂಬರ್‌ ೩ ರಂದು ೯ ದಿನಗಳ ದರ್ಶನ ಅಂತ್ಯಗೊಳ್ಳಲಿದೆ. ಇನ್ನು ಈಗಾಗಲೇ ಜಾತ್ರಾ ಮಹೋತ್ಸವಕ್ಕೆ ಬೇಕಾದ ಸಿದ್ಧತೆಗಳನ್ನ ಜಿಲ್ಲಾಡಳಿತ ಕೂಡ ಮಾಡಿಕೊಳ್ಳುತ್ತಿದೆ.

ಈ ಸಂಬಂಧವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಾಸನಾಂಬ ಜಾತ್ರಾ ಮಹೋತ್ಸವದ ಪೂರ್ವ ಸಿದ್ಧತಾ ಸಭೆ ನಡೆಸಲಾಗಿದ್ದು, ಕಳೆದ ಬಾರಿ ಕಂಡು ಬಂದ ಲೋಪದೋಷಗಳನ್ನ ಸರಿಪಡಿಸಿಕೊಂಡು ಜಾತ್ರೆಗೆ ಬೇಕಾದ ಅಗತ್ಯ ಸಿದ್ದತೆಗೆ ಕ್ರಮಕೈಗೊಳ್ಳುವಂತೆ ಡಿಸಿ ಸತ್ಯಭಾಮ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇನ್ನು ಸಾರ್ವಜನಿಕರಿಗೆ ದೇವಿ ದರ್ಶನಕ್ಕೆ ೯ ದಿನಗಳು ಮಾತ್ರ ಅವಕಾಶವಿರುತ್ತದೆ. ಭಕ್ತಾಧಿಗಳಿಗೆ ದೇವಿ ದರ್ಶನ ಪಡೆಯಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜೊತೆಗೆ ಕುಡಿಯುವ ನೀರು, ವಿದ್ಯುತ್‌ ದೀಪಾಲಂಕಾರ ಹೂವಿನ ಅಲಂಕಾರ, ಲಡ್ಡು ಪ್ರಸಾದ, ದೊನ್ನೆ ಪ್ರಸಾದ ಮತ್ತೀತರ ಅಗತ್ಯ ಸಿದ್ಧತೆಗಾಗಿ ಒಂದು ವಾರದೊಳಗೆ ಟೆಂಡರ್‌ ಕರೆಯುವಂತೆ

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಇಂದು ಮೈಸೂರಿನಲ್ಲಿ ಜಾಗತಿಕ ಸೈಕಲ್ ಸವಾರಿ

ಸಿರಿ ಮೈಸೂರು ಹಿಂದೊಮ್ಮೆ ಕಾಲವೊಂದಿತ್ತು. ಆಗೆಲ್ಲಾ ರಸ್ತೆಯಲ್ಲಿ ಮೋಟಾರು ವಾಹನಗಳ ಸುಳಿವೇ ಇರುತ್ತಿರಲಿಲ್ಲ. ಬಹಳ ಶ್ರೀಮಂತರು ಮಾತ್ರ ಮೋಟಾರು ವಾಹನಗಳನ್ನು…

9 seconds ago

ನಾಳೆ ಅರಮನೆಗೆ ಅಭಿಮನ್ಯು ಪ್ರವೇಶ

ಚಿರಂಜೀವಿ ಸಿ.ಹುಲ್ಲಹಳ್ಳಿ ಸತತ ಆರು ಬಾರಿ ಅಂಬಾರಿ ಹೊತ್ತಿದ್ದ ಆನೆ; ಈ ಬಾರಿ ನಿಶಾನೆ ಆನೆಯಾಗಿ ಭಾಗಿಯಾಗುವ ಸಾಧ್ಯತೆ ಮೈಸೂರು:…

6 mins ago

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

14 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

15 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

15 hours ago