ಹಾಸನ: ವರ್ಷಕ್ಕೆ ಒಂದು ಬಾರಿ ಮಾತ್ರ ದರ್ಶನ ಕರುಣಿಸುವ ಹಾಸನದ ಅಧಿದೇವತೆ ಹಾಸನಾಂಬೆಯ ಜಾತ್ರಾ ಮಹೋತ್ಸವ ಇದೇ ಅಕ್ಟೋಬರ್.24ರಿಂದ ನವೆಂಬರ್.3ರವರೆಗೆ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಜಾತ್ರೆಯ ಪೂರ್ವ ಸಿದ್ಧತಾ ಕಾರ್ಯ ಬಹುತೇಕ ಮುಗಿದಿದ್ದು, ಒಂದು ವರ್ಷದಿಂದ ಜಿಲ್ಲಾ ಖಜಾನೆಯಲ್ಲಿ ಭದ್ರಪಡಿಸಿದ್ದ ಒಡವೆಗಳನ್ನು ದೇವಾಲಯಕ್ಕೆ ತರಲಾಗಿದೆ.
ಹಾಸನಾಂಬ ಗರ್ಭಗುಡಿಯ ಬಾಗಿಲು ತೆರೆದ ಮಾರನೇ ದಿನವೇ ದೇವಿಗೆ ಆಭರಣ ಧಾರಣೆ ಮಾಡಲಾಗುತ್ತದೆ.
ಈ ಹಿನ್ನೆಲೆಯಲ್ಲಿ ಮೆರವಣಿಗೆಗೂ ಮುನ್ನ ಹಾಸನಾಂಬ ದೇವಾಲಯದ ಪ್ರಧಾನ ಅರ್ಚಕ ನಾಗರಾಜ್‌ಹಾಗೂ ಉಪವಿಭಾಗಾಧಿಕಾರಿಗಳು, ತಹಶೀಲ್ದಾರ್‌ಸಮ್ಮುಖದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.