ಹಾಸನ: ಸೈಕಲ್‌ನಲ್ಲಿ ಆಟವಾಡುತ್ತಿದ್ದ ವೇಳೆ ಆಯತಪ್ಪಿ ನೀರಿನ ಸಂಪ್‌ಗೆ ಬಿದ್ದು 4 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹಾಸನದ ಅಣಚಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಎಡನ್ ಸ್ಟೀವ್ ಎಂಬಾತನೇ ಮೃತ ಬಾಲಕನಾಗಿದ್ದಾನೆ. ಎಡನ್ ಸ್ಟೀವ್ ಆಟವಾಡುತ್ತಿದ್ದ ವೇಲೆ ಪೋಷಕರು ಮನೆಯಲ್ಲಿದ್ದರು. ಸ್ವಲ್ಪ ಸಮಯದ ಬಳಿಕ ಪೋಷಕರು ಹೊರಗೆ ಬಂದು ಮಗುವಿಗಾಗಿ ಹುಡುಕಾಟ ನಡೆಸಿದ್ದರು. ಈ ವೇಳೆ ನೀರಿನ ಸಂಪ್ ಬಳಿ ಮಗುವಿನ ಸೈಕಲ್ ಬಿದ್ದಿದ್ದು, ಸಂಪ್ ಪರಿಶೀಲನೆ ನಡೆಸಿದಾಗ ಶವ ನೀರಿನಲ್ಲಿ ತೇಲುತ್ತಿರುವುದು ಕಾಣಿಸಿದೆ.
ಘಟನಾ ಸ್ಥಳಕ್ಕೆ ಹಾಸನ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.





