ಹಾಸನ: ಕುಡಿಯುವುದನ್ನು ಬಿಡು ಎಂದು ಬುದ್ಧಿ ಹೇಳಿದ್ದಕ್ಕೆ ದುರುಳನೋರ್ವ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ರಾಂಪುರದಲ್ಲಿ ನಡೆದಿದೆ.
ಗಿರೀಶ್ ಎಂಬುವವರೇ ಕೊಲೆಯಾದ ವ್ಯಕ್ತಿಯಾಗಿದ್ದು, ರಮೇಶ್ ಎಂಬಾತನೇ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.
ಅಂಗಡಿ ಬಳಿ ಕುಳಿತಿದ್ದ ಗಿರೀಶ್ ಬಳಿ ರಮೇಶ್ ಕುಡಿದು ಮಾತನಾಡುತ್ತಿದ್ದ. ಈ ವೇಳೆ ಗಿರೀಶ್ ಆರೋಪಿ ರಮೇಶನಿಗೆ ಕುಡಿಯಬೇಡ ಎಂದು ಬುದ್ದಿವಾದ ಹೇಳಿದ್ದರು.
ಇಷ್ಟಕ್ಕೆ ಸಿಟ್ಟಿಗೆದ್ದ ರಮೇಶ್ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ. ಈ ಸಂಬಂಧ ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…
ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್ ಕೋಡ್ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…