ಹಾಸನ : ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ರಸ್ತೆಬದಿಯಲ್ಲಿ ನಿಂತಿದ್ದ ನಾಲ್ವರು ಯುವಕರ ಮೇಲೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ.
ಭಾನುವಾರ ರಾತ್ರಿ 9:30 ರ ಸುಮಾರಿಗೆ ಹಾಸನ ಜಿಲ್ಲೆಯ ಪೆನ್ಷನ್ ಮೊಹಲ್ಲಾದಲ್ಲಿ ಈ ಘಟನೆ ನಡೆದಿದ್ದು, ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ದೃಶ್ಯ ಸೆರೆಯಾಗಿದೆ.
ಸಿಸಿಟಿವಿ ದೃಶ್ಯಗಳ ಪ್ರಕಾರ, ಅತಿ ವೇಗದಲ್ಲಿ ಚಲಿಸುತ್ತಿದ್ದ ಕಿಯಾ ಕಾರು ನಿಯಂತ್ರಣ ತಪ್ಪಿ ಪಾದಚಾರಿಗಳ ಗುಂಪಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಓರ್ವ ಮೇಲಕ್ಕೆ ಹಾರಿ ಕೆಳಗೆ ಬಿದ್ದಿದ್ದು, ಉಳಿದ ಮೂವರು ಪಕ್ಕದಲ್ಲೇ ಬಿದ್ದಿದ್ದಾರೆ. ಪರಿಣಾಮ ತೀವ್ರ ಗಾಯಗಳಾಗಿವೆ.
ಜಿಲ್ಲಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.





