ಹಾಸನ: ಹಾಸನ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಜೆಡಿಎಸ್ ಪಾಲಾಗಿದ್ದು, ಶಾಸಕ ಎಚ್.ಪಿ.ಸ್ವರೂಪ್ ತಮ್ಮ ಆಪ್ತರಿಗೆ ಗಾದಿ ಕೊಡಿಸುವ ಮೂಲಕ ತಮ್ಮ ನಾಯಕತ್ವದ ಹಿಡಿತ ಸಾಬೀತುಪಡಿಸಿದ್ದಾರೆ. ಈ ಮೂಲಕ ತಮ್ಮ ಎದುರಾಳಿ ಮಾಜಿ ಶಾಸಕ ಪ್ರೀತಂ ಗೌಡಗೆ ಠಕ್ಕರ್ ನೀಡಿದ್ದಾರೆ.
9ನೇ ವಾರ್ಡ್ ಜೆಡಿಎಸ್ ಸದಸ್ಯ ಎಂ ಚಂದ್ರೇಗೌಡ ಅಧ್ಯಕ್ಷರಾಗಿ ಹಾಗೂ ಜೆಡಿಎಸ್ ಬೆಂಬಲಿಸಿದ್ದ 35ನೇ ವಾರ್ಡ್ ಸದಸ್ಯೆ ಲತಾದೇವಿ ಸುರೇಶ್ ಅವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಒಟ್ಟು 35 ಸಂಖ್ಯಾಬಲದ ಹಾಸನ ನಗರಸಭೆಯಲ್ಲಿ ಜೆಡಿಎಸ್ 17, ಕಾಂಗ್ರೆಸ್ 2, ಬಿಜೆಪಿ 14 ಸದಸ್ಯರ ಬಲ ಹೊಂದಿದ್ದು, ಇಬ್ಬರು ಪಕ್ಷೇತರರಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಲು ಒಟ್ಟು 19 ಮತಗಳ ಅಗತ್ಯವಿತ್ತು. ಇಬ್ಬರು ಕಾಂಗ್ರೆಸ್ ಸದಸ್ಯರನ್ನು ಹೊರತುಪಡಿಸಿ ಉಳಿದ ಎಲ್ಲಾ 34 ಸದಸ್ಯರು ಚಂದ್ರೇಗೌಡ ಪರ ಕೈ ಎತ್ತಿ ಮತ ಚಲಾಯಿಸಿದರು. ಈ ಮೂಲಕ ಚಂದ್ರೇಗೌಡ ಅವರು ಅಧ್ಯಕ್ಷರಾಗಿ ಆಯ್ಕೆಯಾದರು.
ಚುನಾವಣೆ ಪ್ರಕ್ರಿಯೆಯಲ್ಲಿ ಭಾಗಿಯಾದ ಶಾಸಕ ಎಚ್.ಪಿ.ಸ್ವರೂಪ್ ಪ್ರಕಾಶ್ ಸಹ ಮತ ಚಲಾಯಿಸಿದರು. ಈ ಮೂಲಕ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದರು. ಈ ಮೂಲಕ ಮಾಜಿ ಶಾಸಕ ಪ್ರೀತಂಗೌಡ ಅವರ ಕಾರ್ಯತಂತ್ರಗಳನ್ನು ವಿಫಲಗೊಳಿಸಿದರು.
ಮೈಸೂರು : ಕಾಂಗ್ರೆಸ್ ಪಕ್ಷ ಎಂದರೆ ಅದು ಅಹಿಂದ. ಅದನ್ನು ಅರಿಯದೆ ಅಹಿಂದ ಸಮಾವೇಶ ಮಾಡಿ ಕಾಂಗ್ರೆಸ್ ಪಕ್ಷವನ್ನು ಮುಚ್ಚಲು…
ಮೈಸೂರು : ಲಂಡನ್ನ ಬಂಕಿಂಗ್ ಹ್ಯಾಮ್ ಅರಮನೆಯಲ್ಲಿ ಎಲ್ಲರಿಗೂ ಪ್ರವೇಶ ಇಲ್ಲ. ದಿನಕ್ಕೆ ಇಂತಿಷ್ಟೇ ಜನ ಭೇಟಿ ನೀಡಬೇಕು ಎಂಬ…
ಬೆಂಗಳೂರು : ಬೆಂಗಳೂರಿನಲ್ಲಿ ಮಾದಕ ವಸ್ತುಗಳ ತಯಾರಿಕೆಯ ಘಟಕಗಳು ಪತ್ತೆಯಾಗಿರುವುದಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಿಡಿಮಿಡಿಯಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳನ್ನು…
ಬೆಂಗಳೂರು : ಮುಂದಿನ ಎರಡು ಮೂರು ತಿಂಗಳ ಒಳಗಾಗಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯಿತಿ ಗಳಿಗೆ ಚುನಾವಣೆ ನಡೆಸಲು…
ಮೈಸೂರು : ರಾಮಕೃಷ್ಣ ನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಡಿ.30 ರ ಬದಲಿಗೆ 29ರಂದೇ ನಡೆಸಲಿರುವುದರಿಂದ…
ಬೆಂಗಳೂರು : ನಟ ಕಿಚ್ಚ ಸುದೀಪ್ ಮಗಳು, ಗಾಯಕಿ ಸಾನ್ವಿ ಸುದೀಪ್ ಬಗ್ಗೆ ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟ…