ಹಾಸನ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ನಿಖಿಲ್ ಕುಮಾರ್‌ಸ್ವಾಮಿ ಅವರಿಂದು ಕುಲದೇವರ ಮೊರೆ ಹೋಗಿದ್ದು, ಪತ್ನಿ ರೇವತಿಯೊಡನೆ ಕುಟುಂಬ ಸಮೇತರಾಗಿ ಬಂದು ಪೂಜೆ ಸಲ್ಲಿಸಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಹುಟ್ಟೂರಾಗಿರುವ ಹರದನಹಳ್ಳಿಯಲ್ಲಿ ಇಂದು ಕುಲದೇವರಾಗಿರುವ ದೇವೇಶ್ವರನಿಗೆ ಪತ್ನಿ ರೇವತಿ ಹಾಗೂ ಮಗನೊಡನೆ ಬಂದು ನಿಖಿಲ್ ಕುಮಾರಸ್ವಾಮಿ ಪೂಜೆ ನೆರವೇರಿಸಿದ್ದಾರೆ.
ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮನೆ ದೇವರಿಗೆ ಪೂಜೆ ಸಲ್ಲಿಸುವುದು ಪತ್ನಿ ರೇವತಿಯವರ ಆಸೆಯಾಗಿತ್ತು. ಈ ಕಾರಣಕ್ಕಾಗಿ ಇಂದು ಹರದನಹಳ್ಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದೇವೆ. ಉಪ ಚುನಾವಣೆ ಫಲಿತಾಂಶಕ್ಕೆ ಇನ್ನು ಐದು ದಿನಗಳು ಬಾಕಿಯಿದ್ದು, ಗೆಲ್ಲುವ ನಿರೀಕ್ಷೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಚುನಾವಣೆ ವೇಳೆ ಮಾಡಿದ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಕಾಂಗ್ರೆಸ್ ನಾಯಕರ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ನನ್ನ ಸ್ವಾಭಾವಿಕ ಗುಣದಂತೆ ಕೆಲವೊಂದು ವಿಚಾರಗಳನ್ನು ರಾಜ್ಯದ ಜನತೆಗೆ ಬಿಟ್ಟು ಬಿಡುತ್ತೇನೆ. ಏಕೆಂದರೆ ನಮ್ಮ ತಾತನವರಾದ ಎಚ್.ಡಿ.ದೇವೇಗೌಡ ಅವರಿಗೂ ರಾಮನಗರಕ್ಕೂ 1983 ವರ್ಷಗಳ ರಾಜಕೀಯ ನಂಟಿದೆ ಎಂದರು.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…