ಹಾಸನ: ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಅರಕಲಗೂಡು ಪಟ್ಟಣದ ಹೆಂಟಿಗೆರೆ ವಾರ್ಡ್ ನಂ.17ರಲ್ಲಿ ನಡೆದಿದೆ.
ಗ್ರಾಮದ ದೊಡ್ಡೇಗೌಡ ಎಂಬುವವರ ಮನೆಯಲ್ಲಿ ಅಸ್ಸಾಂ ಮೂಲದ ಕಾರ್ಮಿಕರು ವಾಸವಿದ್ದರು. ಇಂದು ಬೆಳಿಗ್ಗೆ ಅಡುಗೆ ಮಾಡುವಾಗ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ.
ಪರಿಣಾಮ ಮನೆಯಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಲ್ಲದೇ ಮನೆಯಲ್ಲಿ ವಸ್ತುಗಳೆಲ್ಲಾ ಬೆಂಕಿಗಾಹುತಿಯಾಗಿವೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





