Mysore
35
scattered clouds

Social Media

ಶುಕ್ರವಾರ, 24 ಏಪ್ರಿಲ 2026
Light
Dark

ಹಾಸನ: ವೇದಿಕೆ ಮೇಲೆಯೇ ಗಳಗಳನೆ ಕಣ್ಣೀರು ಹಾಕಿದ ಎಚ್.ಡಿ.ರೇವಣ್ಣ

ಹಾಸನ: ಜಿಲ್ಲೆಯ ಹೊಳೆನರಸೀಪುರ ವ್ಯಾಪ್ತಿಯಲ್ಲಿ ನಡೆದ ದೇವಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಭಾವುಕರಾಗಿ ಕಣ್ಣೀರು ಹಾಕಿದ್ದಾರೆ.

ಕ್ಷೇತ್ರದ ಅಭಿವೃದ್ಧಿ ಕುರಿತು ಮಾತನಾಡುತ್ತಾ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಎಚ್.ಡಿ.ರೇವಣ್ಣ ವಾಗ್ದಾಳಿ ನಡೆಸಿದರು.

1990ರ ದಶಕದಲ್ಲಿ ಎಚ್.ಡಿ.ದೇವೇಗೌಡರಿಗೆ ರಾಜಕೀಯವಾಗಿ ಮರುಜನ್ಮ ನೀಡಿದ ಗ್ರಾಮಗಳ ಬಗ್ಗೆ ಸ್ಮರಿಸುತ್ತಾ ರೇವಣ್ಣ ಭಾವುಕರಾದರು. ಕುಮಾರಸ್ವಾಮಿ ಅವರ ಅವಧಿಯಲ್ಲಿ ಈ ಭಾಗದ ಹೋಬಳಿಗೆ ಸುಮಾರು 450 ಕೋಟಿ ರೂಪಾಯಿಗೂ ಹೆಚ್ಚು ಅನುದಾನ ತಂದು ಕೆಲಸ ಮಾಡಿದ್ದೇವೆ ಹಾಗೂ 140ಕ್ಕೂ ಹೆಚ್ಚು ದೇವಸ್ಥಾನಗಳನ್ನು ಜೀರ್ಣೊದ್ಧಾರ ಮಾಡಿದ್ದೇವೆ ಎಂದು ಹೇಳಿದರು.

ಇನ್ನು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ನನ್ನ ಜೀವನದಲ್ಲಿ ಇಷ್ಟು ಕೆಟ್ಟ ಸರ್ಕಾರವನ್ನು ನಾನು ನೋಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈಗ ನಡೆಯುತ್ತಿರುವ ಅನ್ಯಾಯಗಳಿಗೆ ಕಾಲ ಬಂದಾಗ ಬಡ್ಡಿ ಸಮೇತ ತೀರಿಸುತ್ತೇನೆ ಎಂದು ಗುಡುಗಿದರು.

 

Tags:
error: Content is protected !!