ಹಾಸನ: ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಕೋಡಿ ಮಠಕ್ಕೆ ಗೃಹ ಸಚಿವ ಜಿ.ಪರಮೇಶ್ವರ್ ಭೇಟಿ ನೀಡಿ ಶ್ರೀಗಳ ಜೊತೆ ಕೆಲಕಾಕ ಚರ್ಚೆ ನಡೆಸಿದರು.
ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ಪೈಪೋಟಿ ವಿಚಾರ ಜೋರಾಗಿರುವ ಬೆನ್ನಲ್ಲೇ ಇಂದು ಗೃಹ ಸಚಿವ ಪರಮೇಶ್ವರ್ ಅವರು ಕೋಡಿಮಠಕ್ಕೆ ಭೇಟಿ ನೀಡಿದರು.
ಇದನ್ನು ಓದಿ: ದಿತ್ವಾ ಚಂಡಮಾರುತದ ಅಬ್ಬರ: ಶ್ರೀಲಂಕಾದಲ್ಲಿ 330ರ ಗಟಿ ದಾಟಿದ ಸಾವಿನ ಸಂಖ್ಯೆ
ಕೋಡಿಮಠದ ಶ್ರೀಗಳು ಭವಿಷ್ಯ ನುಡಿಯುವುದರಲ್ಲಿ ಪ್ರಸಿದ್ಧಿ ಪಡೆದಿದ್ದಾರೆ. ಸದ್ಯದ ರಾಜ್ಯ ರಾಜಕಾರಣದಲ್ಲಿ ಕುರ್ಚಿ ಪೈಪೋಟಿ ಜೋರಾಗಿರುವಾಗಲೇ ಗೃಹ ಸಚಿವ ಪರಮೇಶ್ವರ್ ಅವರು ದಿಢೀರ್ ಆಗಿ ಕೋಡಿಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದು ಚರ್ಚೆ ನಡೆಸಿದರು.
ಸ್ಥಳೀಯ ಕಾಂಗ್ರೆಸ್ ಮುಖಂಡರಿಗೆ ಹಾಗೂ ಪೊಲೀಸ್ ಇಲಾಖೆಗ ಯಾವುದೇ ಮಾಹಿತಿ ನೀಡದೇ ಪರಮೇಶ್ವರ್ ಕೋಡಿಮಠಕ್ಕೆ ಭೇಟಿ ನೀಡಿ ಶ್ರೀಗಳ ಜೊತೆ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿರುವುದು ಭಾರೀ ಅಚ್ಚರಿಗೆ ಕಾರಣವಾಗಿದೆ.





