ಹಾಸನ

ಹಾಸನ| ಕಲ್ಲಿನ ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು

ಹಾಸನ: ದೇವಾಲಯದ ಕಬ್ಬಿಣದ ಬಾಗಿಲು ತೆರೆದು ಕಲ್ಲಿನ ಗಣೇಶ ಮೂರ್ತಿಗೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿರುವ ಘಟನೆ ಹಾಸನ ಜಿಲ್ಲೆ ಬೇಲೂರು ಪಟ್ಟಣದಲ್ಲಿ ನಡೆದಿದೆ.

ಸಾರಿಗೆ ಬಸ್‌ ನಿಲ್ದಾಣ ಮುಂಭಾಗವಿರುವ ಬೇಲೂರು ಪುರಸಭೆ ಆವರಣದಲ್ಲಿರುವ ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ ಪ್ರತಿನಿತ್ಯ ಪೂಜೆ ನಡೆಯುತ್ತದೆ.

ಪ್ರತಿನಿತ್ಯ ವ್ಯಾಪಾರಿಗಳು ಬೆಳಿಗ್ಗೆ ಗಣೇಶಮೂರ್ತಿಗೆ ಕೈಮುಗಿದು ವ್ಯಾಪಾರ ಆರಂಭಿಸುತ್ತಾರೆ. ಆದರೆ ಕಳೆದ ತಡರಾತ್ರಿ ಪುರಸಭೆ ಗೇಟ್‌ ಮುರಿದು ಒಳ ನುಗ್ಗಿರುವ ಕಿಡಿಗೇಡಿಗಳು ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿದ್ದಾರೆ.

ಇಂದು ಬೆಳಿಗ್ಗೆ ಭಕ್ತರು ಕೈಮುಗಿಯಲು ಹೋದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಕಿಡಿಗೇಡಿಗಳ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಹತ್ತಿರದಲ್ಲಿರುವ ಅಳವಡಿಸಿರುವ ಸಿಸಿ ಕ್ಯಾಮರಾಗಳನ್ನು ಪರಿಶೀಲನೆ ನಡೆಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

2 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

3 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

3 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

3 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

3 hours ago