ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ.
ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗರ್ಭಿಣಿ ವಂದನಾ ಶವ ಕೆರೆಯಲ್ಲಿ ಪತ್ತೆಯಾಗಿದೆ.
ವಂದನಾ ಪತಿ ಹಾಗೂ ಆತನ ಪೋಷಕರ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಕೇಳಿ ಬಂದಿದೆ.
ಇದನ್ನು ಓದಿ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣಕ್ಕಾಗಿ ಮರಗಳ ಮಾರಣಹೋಮ: ಎಫ್‌ಐಆರ್ ದಾಖಲು
ಮಗಳ ಸಾವಿಗೆ ಗಂಡ ಹಾಗೂ ಆತನ ಪೋಷಕರೇ ಕಾರಣ ಎಂದು ವಂದನಾ ಪೋಷಕರು ಆರೋಪಿಸಿದ್ದಾರೆ. ಒಂದೂವರೆ ವರ್ಷದ ಹಿಂದೆ ಪ್ರೀತಿಸಿ ರೂಪಿತ್ ಹಾಗೂ ವಂದನಾ ಮದುವೆಯಾಗಿದ್ದರು.
ಡಿಸೆಂಬರ್.2ರಂದು ಅತ್ತೆ ಮಂಜುಳಾ ಹಾಗೂ ಸೊಸೆ ವಂದನಾ ನಡುವೆ ಜಗಳವಾಗಿತ್ತು. ಮೂರು ದಿನಗಳ ಹಿಂದೆ ವಂದನಾ ನಾಪತ್ತೆಯಾಗಿದ್ದರು.
ನಿನ್ನೆ ಸಂಜೆ ಹೊನ್ನವಳ್ಳಿ ಗ್ರಾಮದ ಕೆರೆಯಲ್ಲಿ ವಂದನಾ ಶವ ಪತ್ತೆಯಾಗಿದ್ದು, ಹಾಸನ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಈ ಸಂಬಂಧ ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




