ಹಾಸನ

ಹಾಸನ | ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆ

ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ.

ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗರ್ಭಿಣಿ ವಂದನಾ ಶವ ಕೆರೆಯಲ್ಲಿ ಪತ್ತೆಯಾಗಿದೆ.

ವಂದನಾ ಪತಿ ಹಾಗೂ ಆತನ ಪೋಷಕರ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಕೇಳಿ ಬಂದಿದೆ.

ಇದನ್ನು ಓದಿ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣಕ್ಕಾಗಿ ಮರಗಳ ಮಾರಣಹೋಮ: ಎಫ್‌ಐಆರ್‌ ದಾಖಲು

ಮಗಳ ಸಾವಿಗೆ ಗಂಡ ಹಾಗೂ ಆತನ ಪೋಷಕರೇ ಕಾರಣ ಎಂದು ವಂದನಾ ಪೋಷಕರು ಆರೋಪಿಸಿದ್ದಾರೆ. ಒಂದೂವರೆ ವರ್ಷದ ಹಿಂದೆ ಪ್ರೀತಿಸಿ ರೂಪಿತ್‌ ಹಾಗೂ ವಂದನಾ ಮದುವೆಯಾಗಿದ್ದರು.

ಡಿಸೆಂಬರ್.‌2ರಂದು ಅತ್ತೆ ಮಂಜುಳಾ ಹಾಗೂ ಸೊಸೆ ವಂದನಾ ನಡುವೆ ಜಗಳವಾಗಿತ್ತು. ಮೂರು ದಿನಗಳ ಹಿಂದೆ ವಂದನಾ ನಾಪತ್ತೆಯಾಗಿದ್ದರು.

ನಿನ್ನೆ ಸಂಜೆ ಹೊನ್ನವಳ್ಳಿ ಗ್ರಾಮದ ಕೆರೆಯಲ್ಲಿ ವಂದನಾ ಶವ ಪತ್ತೆಯಾಗಿದ್ದು, ಹಾಸನ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಈ ಸಂಬಂಧ ಅರಕಲಗೂಡು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

12 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

12 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

13 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

13 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

13 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

13 hours ago