ಹಾಸನ: ಕುಡಿದ ಮತ್ತಿನಲ್ಲಿ ಗೆಳೆಯರು ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಕಬ್ಬೂರು ಗ್ರಾಮದಲ್ಲಿ ನಡೆದಿದೆ.
ಗಣೇಶ್ ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದು, ಅಶೋಕ್ ಹಾಗೂ ಸುಧೀರ್ ಎಂಬುವವರೇ ಕೊಲೆ ಮಾಡಿರುವ ಆರೋಪಿಗಳಾಗಿದ್ದಾರೆ.
ಜಮೀನು ಕಾಯಲು ಹೋಗಿದ್ದ ಗಣೇಶ್ ಸ್ನೇಹಿತರ ಜೊತೆ ಎಣ್ಣೆ ಪಾರ್ಟಿ ಮಾಡಿದ್ದ. ಬಳಿಕ ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ ಶುರುವಾಗಿದ್ದು, ಮಾತಿಗೆ ಮಾತು ಬೆಳೆದು ಚಾಕುವಿನಿಂದ ಇರಿದು ಗಣೇಶ್ ಕೊಲೆ ಮಾಡಲಾಗಿದೆ.
ಈ ಸಂಬಂಧ ಹಳ್ಳಿ ಮೈಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.





