ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.
25 ವರ್ಷದ ಯುವತಿ ಶ್ವೇತಾ ಮೃತಪಟ್ಟ ಸಾಫ್ಟ್‌ವೇರ್ ಇಂಜಿನಿಯರ್, ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಂಡಿಲಕ್ಕನಕೊಪ್ಪಲು ಗ್ರಾಮದ ಗಂಗಾಧರ್ ಮತ್ತು ಸರೋಜ ದಂಪತಿಯ ಪುತ್ರಿಯಾದ ಶ್ವೇತಾ ಏಪ್ರಿಲ್ 25ರಂದು ಸಂಜೆ ಮನೆಯಲ್ಲಿದ್ದಾಗ ಹಠಾತ್ತಾಗಿ ಕುಸಿದು ಬಿದ್ದಿದ್ದರು.
ತಕ್ಷಣ ಕುಟುಂಬಸ್ಥರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಮುಂದಾಗಿದ್ದು ಆದರೆ, ಆಸ್ಪತ್ರೆಗೆ ತಲುಪುವ ವೇಳೆಗೆ ಶ್ವೇತಾ ಕೋಮಾಗೆ ಜಾರಿದ್ದರು. ಆಕೆಯನ್ನು ಪರೀಕ್ಷಿಸಿದ ವೈದ್ಯರು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿರುವ ಬಗ್ಗೆ ಮಾಹಿತಿ ನೀಡಿದ್ದರು. ಆದರೆ ಚಿಕಿತ್ಸೆ ಮಾಡುತ್ತಿರುವಾಗಲೇ ಮೆದುಳು ಸಂಪೂರ್ಣ ನಿಷ್ಕ್ರಿಯಗೊಂಡ ಶ್ವೇತಾ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ತುಂಬು ವಯಸ್ಸಿನ ಮಗಳ ಹಠಾತ್ ಸಾವಿನಿಂದ ಗಂಗಾಧರ್ ಕುಟುಂಬ ಕಂಗಾಲಾಗಿದ್ದು, ಹಸನ್ಮುಖಿ ಯುವತಿಯ ಸಾವಿಗೆ ಮ್ಯಾಗ್ನಾ ಸಾಫ್ಟ್ ಕಂಪನಿಯ ಸಹೋದ್ಯೋಗಿಗಳು ಮತ್ತು ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…