Hassan | Son kills father and brother for property
ಹಾಸನ: ಆಸ್ತಿ ವಿಚಾರವಾಗಿ ಜಗಳವಾಗಿ ಮಗನೇ ತಂದೆ ಹಾಗೂ ಸಹೋದರನನ್ನು ಮಚ್ಚಿನಿಂದ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾಸನದಲ್ಲಿ ನಡೆದಿದೆ.
ಹೊಳೆನರಸೀಪುರ ತಾಲ್ಲೂಕಿನ ಗಂಗೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಂದೆ ದೇವೇಗೌಡ ಹಾಗೂ ಸಹೋದರ ಮಂಜುನಾಥ್ ಎಂಬುವವರನ್ನು ಮೋಹನ್ ಎಂಬಾತ ಕೊಲೆ ಮಾಡಿದ್ದಾನೆ.
ಮಂಜುನಾಥ್ ಹಾಗೂ ಮೋಹನ್ ಇಬ್ಬರೂ ವಿವಾಹವಾಗಿರಲಿಲ್ಲ. ಮಂಜುನಾಥ್ ತಂದೆ-ತಾಯಿ ಜೊತೆ ವಾಸವಾಗಿದ್ದು, ಮೋಹನ್ ಒಂದೇ ಮನೆಯಲ್ಲಿದ್ದರೂ ಪ್ರತ್ಯೇಕವಾಗಿ ವಾಸವಾಗಿದ್ದ.
ತಂದೆ ದೇವೇಗೌಡ ಕಳೆದ ಕೆಲ ದಿನಗಳ ಹಿಂದೆ ಆಸ್ತಿ ಮಾರಾಟ ಮಾಡಿದ್ದರು. ಆಸ್ತಿ ಮಾರಿದ ಹಣ ತನಗೂ ನೀಡಿಲ್ಲ ಎಂಬ ಕಾರಣಕ್ಕೆ ಕ್ಯಾತೆ ತೆಗೆದಿದ್ದ. ಇದೇ ಕಾರಣಕ್ಕೆ ಜಗಳವಾಗಿ ಮಧ್ಯರಾತ್ರಿ ಮಲಗಿದ್ದ ಸಹೋದರ ಮಂಜುನಾಥ್‌ನನ್ನು ಮಚ್ಚಿನಿಂದ ಹೊಡೆದಿದ್ದಾನೆ. ಈ ವೇಳೆ ತಡೆಯಲು ಬಂದಾಗ ತಂದೆಯ ಮೇಲೂ ಹಲ್ಲೆ ಮಾಡಿದ್ದಾನೆ.
ತಾಯಿಯ ಮೇಲೂ ಹಲ್ಲೆಗೆ ಮುಂದಾಗಿದ್ದ. ಈ ವೇಳೆ ತಾಯಿ ಓಡಿ ಹೋಗಿ ತಪ್ಪಿಸಿಕೊಂಡಿದ್ದಾರೆ. ಈ ವೇಳೆ ತಂದೆ ಹಾಗೂ ಸಹೋದರ ಇಬ್ಬರನ್ನೂ ಕೊಲೆ ಮಾಡಿ ತಾನೂ ಕೂಡ ಆಸ್ಪತ್ರೆಗೆ ದಾಖಲಾಗಿದ್ದಾನೆ.
ಈ ಸಂಬಂಧ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಮೋಹನ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು : ಹಾಲಿನ ದರ ಏರಿಕೆ ಕುರಿತು ರಾಜ್ಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ…
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ…
ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ…
ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…
ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…