ಹಾಸನ

ಹಾಸನ | ಪತ್ನಿ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತ ಟೆಕ್ಕಿ (ಇಂಜಿನಿಯರ್‌) ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದ ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಇಲ್ಲಿನ ಇಂದಿರನಗರದ ನಿವಾಸಿ ಪ್ರಮೋದ್‌(35) ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ. ಪ್ರಮೋದ್‌ ಹಾಗೂ ಅವರ ಪತ್ನಿ ನಡುವೆ ಆಗಾಗ್ಗೆ ಜಗಳವಾಗುತ್ತಿತ್ತು. ಪತ್ನಿಯ ಸಹೋದರರು ಕೂಡ ಅವರಿಗೆ ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಡಿ.29ರಂದು ಟೆಕ್ಕಿ ಪ್ರಮೋದ್‌ ಕಾಣೆಯಾಗಿದ್ದು, ಪೊಲೀಸರಿಗೆ ನಾಪತ್ತೆ ದೂರು ಸಹ ನೀಡಲಾಗಿತ್ತು. ಅಂದು ರಾತ್ರಿಯೇ ಹೇಮಾವತಿ ನದಿ ಸೇತುವ ತೀರ ಪ್ರಮೋದ್‌ ಬೈಕ್‌ ಪತ್ತೆಯಾಗಿತ್ತು. ಮಾರನೇ ದಿನ ಸ್ಥಳೀಯರು ಬೈಕ್‌ ನೋಡಿ ಅಲ್ಲಿದ್ದ ಪಾಸ್‌ಬುಕ್‌ನಲ್ಲಿದ್ದ ಫೋನ್‌ ನಂಬರ್‌ಗೆ ಕರೆ ಮಾಡಿ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು.

ಬಳಿಕ ಪೊಲೀಸರು, ಅಗ್ನಿಶಾಮಕದಳದ ಸಿಬ್ಬಂದಿ ಹುಡುಕಾಟ ನಡೆಸಿ ಬುಧವಾರ ಬೆಳಿಗ್ಗೆ ನದಿಯಲ್ಲಿ ಪ್ರಮೋದ್‌ ಶವ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Share
Published by
ಚಂದು ಸಿಎನ್

Recent Posts

ಸಿಎಂ ಬದಲಾವಣೆ ಚರ್ಚೆಗೆ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ

ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…

1 second ago

ಮಂಡ್ಯ| ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿರಾಳ

ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…

29 mins ago

ರಾಜ್‌ಘಾಟ್‌ಗೆ ಭೇಟಿ ನೀಡಿ ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಸಮಾಧಿಗೆ ನಮನ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್‌

ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್‌ ಪುಟಿನ್‌, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…

55 mins ago

ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣಹವೆ: ಕೆಲವೆಡೆ ಮಂಜು ಕವಿದ ವಾತಾವರಣ

ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…

1 hour ago

ಹಾಸನ | ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆ

ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…

2 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣಕ್ಕಾಗಿ ಮರಗಳ ಮಾರಣಹೋಮ: ಎಫ್‌ಐಆರ್‌ ದಾಖಲು

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…

2 hours ago