ಹಾಸನ : ಇಲ್ಲಿನ ಮೊಸಳೆ ಹೊಸಳ್ಳಿಯಲ್ಲಿ ಗಣೇಶೋತ್ಸವದ ಮೆರವಣಿಗೆ ವೇಳೆ ಟ್ರಕ್ ನುಗ್ಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನ ಮೃತಪಟ್ಟಿದ್ದು, ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಶನಿವಾರ ಗಾಯಾಳುಗಳ ಆರೋಗ್ಯ ವಿಚಾರಿಸಿದರು.
ಹಾಸನದ ಹಿಮ್ಸ್ ಆಸ್ಪತ್ರೆಗೆ ತೆರಳಿ ಗಾಯಾಳುಗಳನ್ನು ಭೇಟಿ ಮಾಡಿದರು. ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಜೆಡಿಎಸ್ ಪಕ್ಷದ ವತಿಯಿಂದ ತಲಾ 1 ಲಕ್ಷ ರೂ. ಪರಿಹಾರ ನೀಡುವುದಾಗಿ ದೇವೇಗೌಡ ಘೋಷಣೆ ಮಾಡಿದರು.
ಗಂಭೀರವಾಗಿ ಗಾಯಗೊಂಡವರಿಗೆ 25 ಸಾವಿರ, ಸ್ವಲ್ಪ ಪ್ರಮಾಣದಲ್ಲಿ ಗಾಯಗೊಂಡವರಿಗೆ 20 ಸಾವಿರ, ಚಿಕ್ಕಪುಟ್ಟ ಗಾಯಗೊಂಡವರಿಗೆ ತಲಾ 15 ಸಾವಿರ ರೂ. ಪರಿಹಾರ ನೀಡುವುದಾಗಿ ಘೋಷಿಸಿದರು. ಸರ್ಕಾರ ಪರಿಹಾರದ ಮೊತ್ತವನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿದರು.





