ಹಾಸನ

ಹಾಸನ ದುರಂತ | ಗಾಯಾಳು ಆರೋಗ್ಯ ವಿಚಾರಿಸಿ ಪರಿಹಾರ ಘೋಷಿಸಿದ ದೇವೇಗೌಡ

ಹಾಸನ : ಇಲ್ಲಿನ ಮೊಸಳೆ ಹೊಸಳ್ಳಿಯಲ್ಲಿ ಗಣೇಶೋತ್ಸವದ ಮೆರವಣಿಗೆ ವೇಳೆ ಟ್ರಕ್ ನುಗ್ಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನ ಮೃತಪಟ್ಟಿದ್ದು, ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡ ಶನಿವಾರ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಹಾಸನದ ಹಿಮ್ಸ್ ಆಸ್ಪತ್ರೆಗೆ ತೆರಳಿ ಗಾಯಾಳುಗಳನ್ನು ಭೇಟಿ ಮಾಡಿದರು. ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಜೆಡಿಎಸ್ ಪಕ್ಷದ ವತಿಯಿಂದ ತಲಾ 1 ಲಕ್ಷ ರೂ. ಪರಿಹಾರ ನೀಡುವುದಾಗಿ ದೇವೇಗೌಡ ಘೋಷಣೆ ಮಾಡಿದರು.

ಗಂಭೀರವಾಗಿ ಗಾಯಗೊಂಡವರಿಗೆ 25 ಸಾವಿರ, ಸ್ವಲ್ಪ ಪ್ರಮಾಣದಲ್ಲಿ ಗಾಯಗೊಂಡವರಿಗೆ 20 ಸಾವಿರ, ಚಿಕ್ಕಪುಟ್ಟ ಗಾಯಗೊಂಡವರಿಗೆ ತಲಾ 15 ಸಾವಿರ ರೂ. ಪರಿಹಾರ ನೀಡುವುದಾಗಿ ಘೋಷಿಸಿದರು. ಸರ್ಕಾರ ಪರಿಹಾರದ ಮೊತ್ತವನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

4 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

4 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

4 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

4 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

4 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

5 hours ago