ಹಾಸನ: ನೀರಿನ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹೊಸೂರಿನಲ್ಲಿ ನಡೆದಿದೆ.
ಮೃತರನ್ನು ಪ್ರಣಯ್(7), ನಿಶಾಂತ್(5) ಎಂದು ಗುರುತಿಸಲಾಗಿದೆ. ಹೊಸೂರಿನ ಐಬಿಸಿ ಕಾಫಿ ಎಸ್ಟೇಟ್‌ನಲ್ಲಿರುವ ನೀರಿನ ಹೊಂಡದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಬಾಲಕರ ಪೋಷಕರು ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಆಟವಾಡುತ್ತಾ ನೀರಿನ ಹೊಂಡದ ಬಳಿ ಹೋದ ಮಕ್ಕಳು ಅಕಸ್ಮಾತ್ ಆಗಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ. ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದ್ದು, ಈ ಸಂಬಂಧ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





