ಹಾಸನ

ಹಾಸನ: ನೀರಿನ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು

ಹಾಸನ: ನೀರಿನ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹೊಸೂರಿನಲ್ಲಿ ನಡೆದಿದೆ.

ಮೃತರನ್ನು ಪ್ರಣಯ್(‌7), ನಿಶಾಂತ್(‌5) ಎಂದು ಗುರುತಿಸಲಾಗಿದೆ. ಹೊಸೂರಿನ ಐಬಿಸಿ ಕಾಫಿ ಎಸ್ಟೇಟ್‌ನಲ್ಲಿರುವ ನೀರಿನ ಹೊಂಡದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಬಾಲಕರ ಪೋಷಕರು ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಆಟವಾಡುತ್ತಾ ನೀರಿನ ಹೊಂಡದ ಬಳಿ ಹೋದ ಮಕ್ಕಳು ಅಕಸ್ಮಾತ್‌ ಆಗಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ. ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದ್ದು, ಈ ಸಂಬಂಧ ಸಕಲೇಶಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

7 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

7 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

7 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

7 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

8 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

9 hours ago