ಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾಗಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಹುಂಡಿಗನಾಳ ಗ್ರಾಮದಲ್ಲಿ ನಡೆದಿದೆ.
ಕೆರೆಯಲ್ಲಿ ಈಜಲೆಂದು ಐವರು ಹೋಗಿದ್ದರು. ಅವರಲ್ಲಿ ಇಬ್ಬರು ಬಾಲಕರು ನೀರು ಪಾಲಾಗಿದ್ದಾರೆ. ವಿಜಯ್ ಕುಮಾರ್ ಹಾಗೂ ಸುಜನ್ ಎಂಬುವವರೇ ಮೃತ ಮಕ್ಕಳಾಗಿದ್ದಾರೆ.
ಇಂದು ಭಾನುವಾರವಾದ ಹಿನ್ನೆಲೆಯಲ್ಲಿ ರಜೆ ಇದ್ದ ಕಾರಣ ಮಕ್ಕಳು ಕೆರೆಯಲ್ಲಿ ಈಜಲು ಹೋಗಿ ದುರಂತಕ್ಕೀಡಾಗಿದ್ದಾರೆ.
ಜವಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬಾಲಕರ ಶವವನ್ನು ಕೆರೆಯಿಂದ ಮೇಲಕ್ಕೆತ್ತಲಾಗಿದೆ.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…