Mysore
25
broken clouds

Social Media

ಮಂಗಳವಾರ, 21 ಏಪ್ರಿಲ 2026
Light
Dark

ಹಾಸನ: ಸಿಡಿಲು ಬಡಿದು ಮಹಿಳೆ ಸಾವು

ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ.

ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ.

ಜಾನುವಾರು ಮೇಯಿಸಲು ಜಮೀನಿಗೆ ತೆರಳಿದ್ದ ನೀಲಮ್ಮ ಮಳೆಯಿಂದ ರಕ್ಷಣೆ ಪಡೆದುಕೊಳ್ಳಲು ಮರದ ಬಳಿ ನಿಂತಿದ್ದರು. ಈ ವೇಳೆ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ಆಲೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Tags:
error: Content is protected !!