Mysore
29
clear sky

Social Media

ಮಂಗಳವಾರ, 20 ಜನವರಿ 2026
Light
Dark

ಹಾಸನ| ಮನೆಯಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಮಹಿಳೆ ಶವವಾಗಿ ಪತ್ತೆ

Student Death

ಹಾಸನ: ಮನೆಯೊಂದರಲ್ಲಿ ಮಹಿಳೆ ಬೆತ್ತಲೆ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆ ಬೇಲೂರು ಪಟ್ಟಣದ ಗಾಣಿಗರ ಬೀದಿಯಲ್ಲಿ ನಡೆದಿದೆ.

ಚಿಕ್ಕಮಗಳೂರಿನ ಮಲ್ಲೇನಹಳ್ಳಿ ಗ್ರಾಮದ ಸ್ಪಂದನಾ ಎಂಬುವವರೇ ಮೃತ ಮಹಿಳೆಯಾಗಿದ್ದಾರೆ. ಎಂಟು ದಿನಗಳ ಹಿಂದೆ ಬೇಲೂರು ಪಟ್ಟಣದಲ್ಲಿ ಬಾಡಿಗೆ ಪಡೆದು ವಾಸವಾಗಿದ್ದರು. ಎರಡು ದಿನಗಳಿಂದ ಮನೆ ಬಾಗಿಲು ತೆರೆದೇ ಇತ್ತು. ಮನೆಯ ಒಳಗೆ ಯಾರೂ ಇದ್ದಂತೆ ಕಾಣುತ್ತಿರಲಿಲ್ಲ. ಅಕ್ಕಪಕ್ಕದ ಮನೆಯವರು ಕರೆದರೂ ಯಾರೂ ಮಾತನಾಡುತ್ತಿರಲಿಲ್ಲ. ಇದರಿಂದ ಅನುಮಾನಗೊಂಡ ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರು ಮನೆಯೊಳಗೆ ಪರಿಶೀಲನೆ ನಡೆಸಿದಾಗ ಮಹಿಳೆ ಶವವಾಗಿ ಪತ್ತೆಯಾಗಿದ್ದಾರೆ. ದುಷ್ಕರ್ಮಿಗಳು ಮಹಿಳೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಬೇಲೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!