Student Death
ಹಾಸನ: ಮನೆಯೊಂದರಲ್ಲಿ ಮಹಿಳೆ ಬೆತ್ತಲೆ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆ ಬೇಲೂರು ಪಟ್ಟಣದ ಗಾಣಿಗರ ಬೀದಿಯಲ್ಲಿ ನಡೆದಿದೆ.
ಚಿಕ್ಕಮಗಳೂರಿನ ಮಲ್ಲೇನಹಳ್ಳಿ ಗ್ರಾಮದ ಸ್ಪಂದನಾ ಎಂಬುವವರೇ ಮೃತ ಮಹಿಳೆಯಾಗಿದ್ದಾರೆ. ಎಂಟು ದಿನಗಳ ಹಿಂದೆ ಬೇಲೂರು ಪಟ್ಟಣದಲ್ಲಿ ಬಾಡಿಗೆ ಪಡೆದು ವಾಸವಾಗಿದ್ದರು. ಎರಡು ದಿನಗಳಿಂದ ಮನೆ ಬಾಗಿಲು ತೆರೆದೇ ಇತ್ತು. ಮನೆಯ ಒಳಗೆ ಯಾರೂ ಇದ್ದಂತೆ ಕಾಣುತ್ತಿರಲಿಲ್ಲ. ಅಕ್ಕಪಕ್ಕದ ಮನೆಯವರು ಕರೆದರೂ ಯಾರೂ ಮಾತನಾಡುತ್ತಿರಲಿಲ್ಲ. ಇದರಿಂದ ಅನುಮಾನಗೊಂಡ ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕಾಗಮಿಸಿದ ಪೊಲೀಸರು ಮನೆಯೊಳಗೆ ಪರಿಶೀಲನೆ ನಡೆಸಿದಾಗ ಮಹಿಳೆ ಶವವಾಗಿ ಪತ್ತೆಯಾಗಿದ್ದಾರೆ. ದುಷ್ಕರ್ಮಿಗಳು ಮಹಿಳೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…