ಹಾಸನ: ಯುವತಿ ವಿಚಾರಕ್ಕೆ ಯುವಕನೋರ್ವನ ಬಟ್ಟೆ ಬಿಚ್ಚಿಸಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ಹೊರವಲಯದ ಗೆಂಡೆಕಟ್ಟೆ ಅರಣ್ಯದಲ್ಲಿ ಈ ಘಟನೆ ನಡೆದಿದ್ದು, ಭರತ್ ಎಂಬ ಯುವಕ ಮೇಲೆ ಗುಂಪು ಹಲ್ಲೆ ನಡೆಸಿದೆ.
ಇದನ್ನು ಓದಿ: ಮಂಡ್ಯ| ಜಿಲ್ಲಾಧಿಕಾರಿ ಕಚೇರಿ ಎದುರೇ ವ್ಯಕ್ತಿ ಆತ್ಮಹತ್ಯೆಗೆ ಯತ್ನ
ಯುವತಿ ಹಾಗೂ ಹಣದ ವಿಚಾರಕ್ಕೆ ಭರತ್‌ನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಬಟ್ಟೆ ಬಿಚ್ಚಿಸಿ ಹಲ್ಲೆ ನಡೆಸಲಾಗಿದೆ.
ಕೆಲವರು ಭರತ್ ಮೇಲೆ ಹಲ್ಲೆ ನಡೆಸುತ್ತಿದ್ದರೆ, ಕೆಲವರು ಈ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಈ ಸಂಬಂಧ ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





