ಬೆಂಗಳೂರು: ಮುಂದಿನ ತಿಂಗಳ ಅಕ್ಟೋಬರ್.9ರಿಂದ ಹಾಸನದ ಅಧಿದೇವತೆ ಹಾಸನಾಂಬ ಜಾತ್ರಾ ಮಹೋತ್ಸವ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾಡಳಿತದ ವತಿಯಿಂದ ಸಿಎಂ ಸಿದ್ದರಾಮಯ್ಯರಿಗೆ ಆಹ್ವಾನ ನೀಡಲಾಯಿತು.
ಇಂದು ಶಾಸಕ ಶಿವಲಿಂಗೇಗೌಡ, ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಆಹ್ವಾನ ನೀಡಿದರು.
ಇನ್ನು ಹಾಸನಾಂಬೆ ಜಾತ್ರಾ ಮಹೋತ್ಸವವು ಅಕ್ಟೋಬರ್.9ರಿಂದ 23ರವರೆಗೆ ನಡೆಯಲಿದ್ದು, ಇದಕ್ಕಾಗಿ ಜಿಲ್ಲಾಡಳಿತ ಸಕಲ ರೀತಿಯಲ್ಲೂ ಸಿದ್ಧತೆ ಮಾಡಿಕೊಂಡಿದೆ.
ಇದನ್ನು ಓದಿ: ರಾಜ್ಯದಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ: ರೈತರಿಗೆ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಿಷ್ಟು.!
ಇನ್ನು ಈ ಬಾರಿ ಹಾಸನಾಂಬ ಭಕ್ತರಿಗೆ ಮಹತ್ವದ ಪ್ರಕಟಣೆ ಹೊರಡಿಸಲಾಗಿದ್ದು, ದೇವಾಲಯದ ಆವರಣದಲ್ಲಿ ಪಾದರಕ್ಷೆ ಬಿಡುವುದನ್ನು ನಿಷೇಧಿಸಲಾಗಿದೆ.
ಖಾಸಗಿ ವಾಹನದಲ್ಲಿ ಬರುವವರು ವಾಹನದಲ್ಲಿಯೇ ಪಾದರಕ್ಷೆಗಳನ್ನು ಬಿಟ್ಟು ಬರಬೇಕು. ಪಾರ್ಕಿಂಗ್ ಸ್ಥಳಗಳಲ್ಲಿ ಬಿಡಬಹುದು. ಬಸ್ ನಿಲ್ದಾಣದಲ್ಲಿ ಹಾಗೂ ರೈಲ್ವೆ ಸ್ಟೇಷನ್‌ನಲ್ಲಿ ವಿಶೇಷ ಪಾದರಕ್ಷೆ ಸ್ಟ್ಯಾಂಡ್ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿದೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…