Mysore
25
haze

Social Media

ಶನಿವಾರ, 04 ಏಪ್ರಿಲ 2026
Light
Dark

ಅಕ್ಟೋಬರ್.‌9ರಂದು ಹಾಸನಾಂಬ ದೇವಾಲಯ ಓಪನ್‌

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬ ದೇವಾಲಯದ ಬಾಗಿಲು ಇದೇ ಅಕ್ಟೋಬರ್.‌9ರಂದು ತೆರೆಯಲಿದೆ.

ಈಗಾಗಲೇ ಜಿಲ್ಲಾಡಳಿತದಿಂದ ಹಾಸನಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ ಪೂರ್ವ ಸಿದ್ಧತೆ ನಡೆದಿದೆ. ಈ ಬಾರಿ ದೇವಿಯ ದರ್ಶನದ ಜೊತೆ ಟೂರ್‌ ಪ್ಯಾಕೇಜ್‌, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುವುದು.

ಅಕ್ಟೋಬರ್.‌9ರಂದು ಶಾಸ್ತ್ರೋಕ್ತವಾಗಿ ಹಾಸನಾಂಬ ದೇವಿಯ ಬಾಗಿಲು ತೆರೆಯಲಿದ್ದು, ಅಕ್ಟೋಬರ್.‌23ರಂದು ಮುಚ್ಚಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ, ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಪೂರ್ವಭಾವಿ ಸಭೆ ನಡೆಸಿ ಅಗತ್ಯ ಸಿದ್ಧತೆಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ:-ಓದುಗರ ಪತ್ರ: ಜಾತಿ ಸಮೀಕೆಗೆ ಖಾಸಗಿ ವ್ಯಕ್ತಿಗಳುಬಂದರೆ ಎಚ್ಚರವಿರಲಿ

ಇನ್ನು ಹಾಸನಾಂಬ ಜಾತ್ರಾ ಮಹೋತ್ಸವದ ಅಂಗವಾಗಿ ದೇವಸ್ಥಾನಕ್ಕೆ ಬಣ್ಣ ಹಚ್ಚುವ ಕಾರ್ಯ ಪೂರ್ಣಗೊಂಡಿದೆ. ಹಾಸನ ನಗರದಲ್ಲಿ ಸ್ವಾಗತ ಕಮಾನು, ಲೈಟಿಂಗ್ಸ್‌, ಎಲ್‌ಇಡಿ ಅಳವಡಿಕೆ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಭಕ್ತರಿಗೆ ಅನುಕೂಲ ಕಲ್ಪಿಸಲು ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

Tags:
error: Content is protected !!