ಹಾಸನ : ಹಾಸನಾಂಬೆ ಸಾರ್ವಜನಿಕ ದರ್ಶನೋತ್ಸವ ಇಂದಿನಿಂದ ಆರಂಭವ ಆಗಿದೆ. ಮೊದಲ ದಿನವೇ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ.
ಇಂದಿನಿಂದ 12 ದಿನ ಭಕ್ತರಿಗೆ ಹಾಸನಾಂಬೆ ದರ್ಶನಕ್ಕೆ ಅವಕಾಶ ನಿಡಲಾಗಿದೆ. ಇಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ದರ್ಶನಕ್ಕೆ ಅವಕಾಶ ಇದೆ.
ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಇಂದು ಮಧ್ಯರಾತ್ರಿಯಿಂದಲೇ ಸರತಿ ಸಾಲಿನಲ್ಲಿ ನಿಂತು ಭಕ್ತರು ಕಾಯುತ್ತಿದ್ದಾರೆ. ಈ ಮೂಲಕ ವರ್ಷದ ಬಳಿಕ ಶಕ್ತಿ ದೇವತೆ ಹಾಸನಾಂಬೆಯ ದರ್ಶನವನ್ನು ಪಡೆಯುತ್ತಿದ್ದಾರೆ.
ಮಾಜಿ ಸಚಿವ ಹೆಚ್.ಡಿ ರೇವಣ್ಣ ಬೆಳ್ಳಂಬೆಳಗ್ಗೆ ದೇಗುಲಕ್ಕೆ ಭೇಟಿ ಮಾಡಿ ದರ್ಶನ ಪಡೆದಿದ್ದಾರೆ. ಇಂದು ಶುಕ್ರವಾರ ಹಿನ್ನೆಲೆಯಲ್ಲಿ ಮೊದಲ ಪೂಜೆಗೆ ರೇವಣ್ಣ ಆಗಮಿಸಿದ್ದಾರೆ. ತಮ್ಮ ಆಪ್ತರ ಜೊತೆ ಹಾಸನಾಂಬೆ ದರ್ಶನಕ್ಕೆ ಬಂದಿದ್ದಾರೆ.