ಹಾಸನ

ಹಾಸನಾಂಭ ದರ್ಶನ | ಮೈಸೂರು ಸೇರಿದಂತೆ ವಿವಿಧ ಜಿಲ್ಲೆಯಿಂದ ಹೆಚ್ಚುವರಿ ಬಸ್‌

ಮೈಸೂರು : ಹಾಸನಾಂಭ ಜಾತ್ರಾ ಮಹೋತ್ಸವದ ಅಂಗವಾಗಿ ಅ.೯ರಿಂದ ಅ.೨೨ರವರೆಗೆ ಕೆಎಸ್‌ಆರ್‌ಟಿಸಿ ವತಿಯಿಂದ ವಿಶೇಷ ಕಾರ್ಯಾಚರಣೆಗಾಗಿ ೧೧೫ ಹೆಚ್ಚುವರಿ ಬಸ್‌ಗಳನ್ನು ಓಡಿಸಲು ತೀರ್ಮಾನಿಸಿದೆ.

ಇದನ್ನು ಓದಿ : ಅಕ್ಟೋಬರ್.‌9ರಂದು ಹಾಸನಾಂಬ ದೇವಾಲಯ ಬಾಗಿಲು ಓಪನ್‌

ಮೈಸೂರು ನಗರದಿಂದ ೩೦, ಮೈಸೂರು ಗ್ರಾಮಾಂತರ ೨೦, ಮಂಡ್ಯ ೨೦, ಚಿಕ್ಕಮಗಳೂರು ೨೫ ಹಾಗೂ ತುಮಕೂರಿಂದ ೨೦ ಬಸ್‌ಗಳು ಸೇರಿದಂತೆ ಒಟ್ಟು ೧೧೫ ಹೆಚ್ಚುವರಿ ಬಸ್ ಓಡಿಸಲು ನಿರ್ಧರಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಮುಖ್ಯ ಯಾಂತ್ರಿಕ ಅಭಿಯಂತರರು, ಐದು ಜಿಲ್ಲೆಗಳ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಐದು ಜಿಲ್ಲೆಗಳ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಹಾಸನ ವಿಭಾಗದ ಡಿಸಿಯವರೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ಅ.೮ರಂದು ಮಧ್ಯಾಹ್ನವೇ ಐದು ವಿಭಾಗಗಳಿಂದ ಹೆಚ್ಚುವರಿ ಬಸ್‌ಗಳನ್ನು ಪಡೆದು ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ಸಾರಿಗೆ ಬಸ್‌ಗಳನ್ನು ಕಾರ್ಯಾಚರಣೆ ಮಾಡುವುದು. ಕಾರ್ಯಾಚರಣೆ ಮುಗಿದ ಬಳಿಕ ವಾಹನಗಳನ್ನು ಆಯಾ ವಿಭಾಗಗಳಿಗೆ ಹಿಂದಿರುಗಿಸುವಂತೆ ಸೂಚಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

8 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

8 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

8 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

8 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

8 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

8 hours ago