ಹಾಸನ : ಮಾಜಿ ಸಚಿವ ಎಚ್ ಡಿ ರೇವಣ್ಣ ದೇವಸ್ಥಾನಕ್ಕೆ ಭೇಟಿ ನೀಡಿದ್ದ ವೇಳೆ ಕಾಲು ಜಾರಿ ಬಿದ್ದ ಪರಿಣಾಮ ಪಕ್ಕೆಲುಬಿಗೆ ಪೆಟ್ಟಾಗಿ ಐಸಿಯು ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಏಕಾದಶಿ ಪ್ರಯುಕ್ತ ಉಪವಾಸವಿದ್ದು, ಹೊಳೆ ನರಸೀಪುರ ತಾಲೂಕಿನ ಹರದನಹಳ್ಳಿ ದೇವಾಲಯಕ್ಕೆ ಎಚ್ ಡಿ ರೇವಣ್ಣ ಭೇಟಿ ನೀಡಿದ್ದರು. ಈ ವೇಳೆ ಪೂಜೆ ಸಲ್ಲಿಸಿ ಬರುವಾಗ ಜಾರಿ ಬಿದ್ದಿದ್ದು, ಪಕ್ಕೆಲುಬಿಗೆ ಪೆಟ್ಟಾಗಿದೆ. ಸದ್ಯ ಹೊಳೆನರಸೀಪುರ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.