ಹಾಸನ

ದೇವಸ್ಥಾನದಲ್ಲಿ ಕಾಲುಜಾರಿ ಬಿದ್ದ ಎಚ್.ಡಿ ರೇವಣ್ಣ ; ಐಸಿಯುನಲ್ಲಿ ಚಿಕಿತ್ಸೆ

ಹಾಸನ : ಮಾಜಿ ಸಚಿವ ಎಚ್‌ ಡಿ ರೇವಣ್ಣ ದೇವಸ್ಥಾನಕ್ಕೆ ಭೇಟಿ ನೀಡಿದ್ದ ವೇಳೆ ಕಾಲು ಜಾರಿ ಬಿದ್ದ ಪರಿಣಾಮ ಪಕ್ಕೆಲುಬಿಗೆ ಪೆಟ್ಟಾಗಿ ಐಸಿಯು ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಏಕಾದಶಿ ಪ್ರಯುಕ್ತ ಉಪವಾಸವಿದ್ದು, ಹೊಳೆ ನರಸೀಪುರ ತಾಲೂಕಿನ ಹರದನಹಳ್ಳಿ ದೇವಾಲಯಕ್ಕೆ ಎಚ್‌ ಡಿ ರೇವಣ್ಣ ಭೇಟಿ ನೀಡಿದ್ದರು. ಈ ವೇಳೆ ಪೂಜೆ ಸಲ್ಲಿಸಿ ಬರುವಾಗ ಜಾರಿ ಬಿದ್ದಿದ್ದು, ಪಕ್ಕೆಲುಬಿಗೆ ಪೆಟ್ಟಾಗಿದೆ.  ಸದ್ಯ ಹೊಳೆನರಸೀಪುರ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

52 mins ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

57 mins ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

1 hour ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

1 hour ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

10 hours ago