ಹಾಸನ : ಲೈಂಗಿಕ ದೌರ್ಜನ್ಯ ಮತ್ತು ಅಪಹರಣ ಆರೋಪಗಳು ಮಾಜಿ ಸಚಿವ, ಜೆಡಿಎಸ್ ನಾಯಕ ಎಚ್.ಡಿ ರೇವಣ್ಣ ಕುಟುಂಬ ಮುಜುಗರಕ್ಕೆ ಒಳಗಾಗುವಂತೆ ಮಾಡಿದೆ. ಇದರಿಂದ ಜೆಡಿಎಸ್ ಕಾರ್ಯಕರ್ತರಲ್ಲೂ ಕೂಡ ಉತ್ಸಾಹ ಕುಗ್ಗಿದೆ. ಇದರಿಂದ ಪಕ್ಷ ಸಂಘಟನೆಗೆ ಭಾರೀ ಹೊಡೆತ ಸಹ ಬಿದ್ದಿದೆ. ಈಗಾಗಿ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿ , ಪಕ್ಷ ಸಂಘಟನೆಗೆ ಚುರುಕು ನೀಡುವ ನಿಟ್ಟಿನಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಹಾಸನದಲ್ಲಿ ರೇವಣ್ಣ ನೇತೃತ್ವದಲ್ಲಿ ಬೃಹತ್ ಸಮಾವೇಶ ಮಾಡಲು ನಿರ್ಧರಿಸಿದ್ದಾರೆ.
ಸಕಲೇಶಪುರ ತಾಲೂಕಿನ ದೊಡ್ಡತಪ್ಪಲು ಗ್ರಾಮದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಾಸನದಲ್ಲಿ ಬೃಹತ್ ಸಮಾವೇಶ ಮಾಡುವಂತೆ ಶಾಸಕರ ಒತ್ತಾಯವಿದೆ. ಕಲಾಪ ಮುಗಿದ ನಂತರ ಹಾಸನದಲ್ಲಿ ರೇವಣ್ಣ ಅವರ ನೇತೃತ್ವದಲ್ಲಿ ಬೃಹತ್ ಸಮಾವೇಶ ಮಾಡುತ್ತೇನೆ. ಅವರ ಕುಟುಂಬದಲ್ಲಿ ಕೆಲವು ಸಮಸ್ಯೆಗಳಿವೆ. ಆದರೆ ರೇವಣ್ಣ ಅವರು ಮಾಡಿರುವ ಅಭಿವೃದ್ಧಿ ಕೆಲಸ ಯಾರು ಮರೆಯುವಂತಿಲ್ಲ. ಎಲ್ಲರಿಗಿಂತ ಒಂದು ಹೆಜ್ಜೆ ಹೆಚ್ಚು ಅಭಿವೃದ್ಧಿ ಮಾಡಿದ್ದಾರೆ ಎಂದು ಹೇಳಿದರು.
ಅಲ್ಲದೆ ಬೆಂಗಳೂರಿನ ಮದರ್ ಡೈರಿ ಮೀರಿಸುವ ರೀತಿಯಲ್ಲಿ ಹಾಸನದಲ್ಲಿ ಮೆಗಾ ಡೈರಿ ನಿರ್ಮಾಣ ಮಾಡುತ್ತಿದ್ದಾರೆ. ರೈತರಿಗೆ ಆರ್ಥಿಕ ಶಕ್ತಿ ತುಂಬಲು ಮೆಗಾ ಡೈರಿ ಮಾಡುತ್ತಿದ್ದಾರೆ. ರೇವಣ್ಣ ಅವರ ನೇತೃತ್ವದಲ್ಲಿ ಶಾಸಕರುಗಳನ್ನೊಳಗೊಂಡು ನಾನು ಸೇರಿದಂತೆ ಪಕ್ಷ ಸಂಘಟನೆ ಮಾಡುತ್ತೇನೆ. ಹಾಸನ ಜಿಲ್ಲೆಯ ಜನರ ಋಣವನ್ನು ತೀರಿಸುತ್ತೇನೆ ಎಂದರು.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…