ಹಾಸನ: ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಸರಣಿ ಸಾವುಗಳು ಸಂಭವಿಸುತ್ತಿದ್ದು, ಇಂದು ಒಂದೇ ದಿನ ಮೂವರು ಬಲಿಯಾಗಿದ್ದಾರೆ. ಈ ಮೂಲಕ ಕಳೆದ 40 ದಿನಗಳಲ್ಲಿ 21 ಮಂದಿ ಸಾವನ್ನಪ್ಪಿದ್ದಾರೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ನಿವಾಸಿ ಇಂಗ್ಲೀಷ್ ಪ್ರೊಫೆಸರ್ ಒಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದು, ಮೃತರನ್ನು ಮುತ್ತಯ್ಯ ಎಂದು ಗುರುತಿಸಲಾಗಿದೆ.
ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಜೆ.ಪಿ.ನಗರದಲ್ಲಿ ಹೃದಯಾಘಾತಕ್ಕೆ ಮಹಿಳೆಯೊಬ್ಬರು ಬಲಿಯಾಗಿದ್ದು, ಇವರನ್ನು ಲೇಪಾಕ್ಷಿ ಎಂದು ಗುರುತಿಸಲಾಗಿದೆ. ನನಗೆ ಸುಸ್ತು ಆಗುತ್ತಿದೆ ಎಂದಿದ್ದ ಲೇಪಾಕ್ಷಿ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ.
ಇನ್ನು ರಜೆಗೆಂದು ಊರಿಗೆ ಬಂದಿದ್ದ ಯೋಧ ಜಮೀನಿನಲ್ಲಿ ಉಳುಮೆ ಮಾಡುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕೆಂಬಾಳು ಗ್ರಾಮದ ಲೋಹಿತ್ ಎಂಬುವವರೇ ಮೃತ ಸೈನಿಕನಾಗಿದ್ದಾರೆ.
ಈ ಮೂಲಕ ಕಳೆದ 40 ದಿನಗಳಲ್ಲಿ 21 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಇದರಲ್ಲಿ ಯುವಕರೇ ಹೆಚ್ಚಿನವರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಜನತೆ ಭಯಭೀತರಾಗಿದ್ದು, ಆಸ್ಪತ್ರೆಯ ಮೊರೆ ಹೋಗುತ್ತಿದ್ದಾರೆ.




