Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಜನಸಾಗರ

ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಎರಡನೇ ದಿನವಾದ ಇಂದು ಕೂಡ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ, ದೇವಿಯ ದರ್ಶನ ಪಡೆಯುತ್ತಿದ್ದಾರೆ.

ಮಧ್ಯರಾತ್ರಿಯಿಂದಲೇ ಹಾಸನಾಂಬೆ ದರ್ಶನಕ್ಕೆ ಸಾವಿರಾರು ಜನರು ಆಗಮಿಸಿದ್ದು, ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.

ವೀಕೆಂಡ್‌ ಹಿನ್ನೆಲೆಯಲ್ಲಿ ದೇಗುಲಕ್ಕೆ ಬರುವ ಸಾರ್ವಜನಿಕರ ಸಂಖ್ಯೆ ಹೆಚ್ಚಾಗುತ್ತಿದ್ದು, ನಾಳೆ ದೇವಾಲಯಕ್ಕೆ ಬರುವವರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದೇಗುಲದ ಗರ್ಭಗುಡಿಯ ಬಾಗಿಲನ್ನು ಗುರುವಾರ ತೆರೆಯಲಾಗಿದ್ದು, ನಿನ್ನೆಯಿಂದ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ರಾಜ್ಯ ಮಾತ್ರವಲ್ಲದೇ ಹೊರ ರಾಜ್ಯಗಳಿಂದಲೂ ಅತಿಹೆಚ್ಚು ಮಂದಿ ದೇವಾಲಯಕ್ಕೆ ಆಗಮಿಸುತ್ತಿದ್ದು, ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆಯುತ್ತಿದ್ದಾರೆ.

 

Tags: