ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಎರಡನೇ ದಿನವಾದ ಇಂದು ಕೂಡ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ, ದೇವಿಯ ದರ್ಶನ ಪಡೆಯುತ್ತಿದ್ದಾರೆ.
ಮಧ್ಯರಾತ್ರಿಯಿಂದಲೇ ಹಾಸನಾಂಬೆ ದರ್ಶನಕ್ಕೆ ಸಾವಿರಾರು ಜನರು ಆಗಮಿಸಿದ್ದು, ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.
ವೀಕೆಂಡ್ ಹಿನ್ನೆಲೆಯಲ್ಲಿ ದೇಗುಲಕ್ಕೆ ಬರುವ ಸಾರ್ವಜನಿಕರ ಸಂಖ್ಯೆ ಹೆಚ್ಚಾಗುತ್ತಿದ್ದು, ನಾಳೆ ದೇವಾಲಯಕ್ಕೆ ಬರುವವರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದೇಗುಲದ ಗರ್ಭಗುಡಿಯ ಬಾಗಿಲನ್ನು ಗುರುವಾರ ತೆರೆಯಲಾಗಿದ್ದು, ನಿನ್ನೆಯಿಂದ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ರಾಜ್ಯ ಮಾತ್ರವಲ್ಲದೇ ಹೊರ ರಾಜ್ಯಗಳಿಂದಲೂ ಅತಿಹೆಚ್ಚು ಮಂದಿ ದೇವಾಲಯಕ್ಕೆ ಆಗಮಿಸುತ್ತಿದ್ದು, ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆಯುತ್ತಿದ್ದಾರೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…