ಹಾಸನ : ಕಳೆದ ೫ ದಿನಗಳಲ್ಲಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದ್ದು ಮಳೆಯ ಹೊಡೆತನಕ್ಕೆ ಜನರ ಜೀವನ ಅಸ್ಯವ್ಯಸ್ತಗೊಂಡಿದೆ. ಅದರಲ್ಲೂ ಮಲೆನಾಡು ಭಾಗದ ಸಕಲೇಶಪುರ, ಆಲೂರು, ಬೇಲೂರು ಭಾಗಗಳಲ್ಲಿ ವರುಣನ ಆರ್ಭಟಕ್ಕೆ ಅಲ್ಲಿನ ಜನರು ತತ್ತರಿಸಿ ಹೋಗಿದ್ದಾರೆ. ಇನ್ನು ಮಂಗಳೂರು-ಬೆಂಗಳೂರು ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಕೂಡ ಬಂದ್ ಮಾಡಲಾಗಿದೆ.
ಪುನರ್ವಸು ಮಳೆಯ ಆರ್ಭಟಕ್ಕೆ ಹಾಸನ ಜನರು ತತ್ತರಿಸಿ ಹೋಗಿದ್ದು, ಜಿಲ್ಲೆಯ ಕಿರು ಸೇತುವೆಗಳು ತುಂಬಿ ಹರಿದು ಹಲವು ಗ್ರಾಮಗಳಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಅಲ್ಲದೆ ಗ್ರಾಮಗಳಿಗೆ ತೆರಳಲು ಸಾಧ್ಯವಾಗದೆ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಇನ್ನು ಕೆಲವು ಕಡೆ ಗಾಳಿ ಸಹಿತ ಸುರಿಯುತ್ತಿರುವ ಭಾರೀ ಮಳೆಗೆ ಬೃಹತ್ ಗಾತ್ರದ ಮರಗಳು, ವಿದ್ಯುತ್ ಕಂಬಗಳು ನೆಲಕ್ಕುರಿಳಿವೆ. ಸಕಲೇಶಪುರ ತಾಲೂಕಿನ ಬಿಸಿಲೆ, ಕಟ್ಟೆಪುರ, ಮಾಗೇರಿ, ಮಾರನಹಳ್ಳಿ, ಹಾನಬಾಳು, ಹಾಗೂ ಬೇಲೂರು ತಾಲೂಕಿನ ಬಿಕ್ಕೋಡು, ಮಾಳೆಗೆರೆ, ಕುಶಾವರ ಸೇರಿದಂತೆ ಇನ್ನೂ ಹಲವು ಗ್ರಾಮಗಳಲ್ಲಿ ಮೂರ್ನಾಲ್ಕು ದಿನಗಳಿಂದ ಕರೆಂಟ್ ಇಲ್ಲದೆ ತೊಂದರೆ ಅನುಭವಿಸಿದ್ದಾರೆ.
ಶಿರಾಡಿಘಾಟ್ ನ ದೊಡ್ಡತಪ್ಲು ಪ್ರದೇಶದಲ್ಲಿ ಭೂ ಕುಸಿತವಾಗಿರುವ ಕಾರಣ ರಸ್ತೆ ದುರಸ್ತಿ ಆಗುವವರೆಗೂ ಎಲ್ಲಾ ರೀತಿಯ ವಾಹನ ಸಂಚಾರ ನಿಷೇಧಿಸಿ ಡಿಸಿ ಆದೇಶ ಮಾಡಿದ್ದಾರೆ. ಮಳೆ ಹೆಚ್ಚಾಗಿರುವ ಹಿನ್ನೆಲೆ ಮತ್ತಷ್ಟು ಭೂ ಕುಸಿತದ ಆತಂಕ ಇದ್ದು, ಬೆಂಗಳೂರಿನಿಂದ ಮಂಗಳೂರಿಗೆ ತೆರಳುವ ವಾಹನಗಳು ಚಾರ್ಮಾಡಿ ಘಾಟ್ ಮೂಲಕ ಸಂಚರಿಸಲು ಸೂಚಿಸಿಲಾಗಿದೆ. ಇದರ ಜೊತೆಗೆ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಹಾಸನ ಜಿಲ್ಲೆಯ ಆರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…