ಹಾಸನ: ಹಾಸನದಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಕಾಫಿ ಬೆಳೆ ಕೊಳೆರೋಗಕ್ಕೆ ತುತ್ತಾಗಿದ್ದು, ಅನ್ನದಾತರು ತೀವ್ರ ಕಂಗಾಲಾಗಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ರೈತರು ಕೂಡ ಕಂಗಾಲಾಗಿದ್ದಾರೆ.
ಈ ಬಾರಿ ಕಾಫಿ ಬೆಳೆಯಲ್ಲಿ ಉತ್ತಮ ಆದಾಯ ಸಿಗಲಿದೆ ಎಂಬ ಆಸೆಯಲ್ಲಿದ್ದ ಅನ್ನದಾತರಿಗೆ ಮಳೆರಾಯ ತಣ್ಣೀರು ಎರಚಿದ್ದಾನೆ.
ಧಾರಾಕಾರ ಮಳೆಯಿಂದ ಕಾಫಿ ಬೆಳೆಗೆ ಕೊಳೆರೋಗ ಅಂಟಿದ್ದು, ಗಿಡದಲ್ಲಿ ಕಾಯಿಗಳು ಸಂಪೂರ್ಣ ಉದುರಿ ಹೋಗಿವೆ. ತೋಟದ ತುಂಬೆಲ್ಲಾ ನೆಲದ ಮೇಲೆ ಕಾಫಿ ಹಣ್ಣಾಗುವ ಮೊದಲೇ ಕಾಯಿಗಳಲ್ಲೇ ಉದುರಿದ್ದು, ರೈತರು ತೀವ್ರ ಕಂಗಾಲಾಗಿದ್ದಾರೆ.
ಒಂದೆಡೆ ಮೇ-ಜೂನ್‌ನಲ್ಲಿ ಮಳೆ ರೈತರಿಗೆ ತೀವ್ರ ಖುಷಿ ತಂದಿತ್ತು. ಆದರೆ ಜುಲೈ ವೇಳೆಗೆ ದಾಖಲೆಯ ಧಾರಾಕಾರ ಮಳೆ ಸುರಿದಿದ್ದು, ಕಾಫಿ ಬೆಳೆಗಾರರು ಕಂಗಾಲಾಗಿದ್ದಾರೆ.
ಈ ಬಾರಿ ಕಾಫಿ ಬೆಳೆಯಿಂದ ಏನೂ ಪ್ರಯೋಜನವಿಲ್ಲ. ಹಣ್ಣಾಗುವ ಮೊದಲೇ ಕಾಫಿ ಕಾಯಿಗಳು ಉದುರಿ ಹೋಗಿವೆ. ಹೀಗಾಗಿ ನಮಗೆ ಭಾರೀ ನಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನಮಗೆ ಸೂಕ್ತ ಪರಿಹಾರ ನೀಡಬೇಕು ಎಂದು ಕಾಫಿ ಬೆಳೆಗಾರರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಮೈಸೂರು: ಹೊಸ ವರ್ಷಾಚರಣೆ ಹಾಗೂ ಕ್ರಿಸ್‌ಮಸ್‌ಗೆ ಮೈಸೂರು ನಗರಕ್ಕೆ ಪ್ರವಾಸಿಗರನ್ನು ಸೆಳೆಯುವ ದೃಷ್ಟಿಯಿಂದ ಅರಮನೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನ ಒಳಗೊಂಡ…
ಮಂಡ್ಯ: ಈ ಜಿಲ್ಲೆಯು ಅಪ್ಪಟ ಕನ್ನಡಿಗರು ವಾಸಿಸುವ ಜಿಲ್ಲೆಯಾಗಿದ್ದು, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ವಿಕಾಸಕ್ಕೆ ಈ ಜಿಲ್ಲೆಯ ಕೊಡುಗೆ…
ಮಂಡ್ಯ: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಈ ನಿಟ್ಟಿನಲ್ಲಿ 10ನೇ ತರಗತಿವರೆಗೆ ಕನ್ನಡ ಮಾಧ್ಯಮ ಕಡ್ಡಾಯವಾಗಬೇಕು. ಇಂಗ್ಲೀಷ್ ಮಾಧ್ಯಮದ ಶಾಲೆ ತೆರೆಯುವುದನ್ನು…
ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ.…
ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಹಾಗೂ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು…