ಹಾಸನ: ಹಾಸನ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಹಾಸನ ಜಿಲ್ಲೆಯಾದ್ಯಂತ ಭರ್ಜರಿ ಮಳೆಯಾಗುತ್ತಿದ್ದು, ಹಲವೆಡೆ ಗುಡ್ಡ ಕುಸಿತ ಉಂಟಾಗಿ, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಜಿಲ್ಲೆಯ ಸಕಲೇಶಪುರ, ಆಲೂರು ಹಾಗೂ ಬೇಲೂರು ತಾಲ್ಲೂಕಿನಾದ್ಯಂತ ಮಳೆರಾಯನ ಅಬ್ಬರ ಜೋರಾಗಿದ್ದು, ನಾನಾ ಭಾಗಗಳಲ್ಲಿ ಅತೀವೃಷ್ಟಿ ಉಂಟಾಗಿದೆ.
ಸಕಲೇಶಪುರ ತಾಲ್ಲೂಕಿನಾದ್ಯಂತ ನಿನ್ನೆ ಇಡೀ ದಿನ ಮಳೆಯ ಅಬ್ಬರ ಜೋರಾಗಿತ್ತು. ಭಾರೀ ಮಳೆಗೆ ಹಲವೆಡೆ ಭೂಕುಸಿತವಾಗಿದ್ದು, ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.
ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿರುವ ಪರಿಣಾಮ ಹೇಮಾವತಿ ನದಿ ಮೈದುಂಬಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳೆಲ್ಲಾ ಸಂಪೂರ್ಣ ಜಲಾವೃತವಾಗಿವೆ. ಮುಂಜಾಗ್ರತಾ ಕ್ರಮವಾಗಿ ನದಿ ಬಳಿ ತೆರಳದಂತೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.