ಹಾಸನ

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಹೇಮಾವತಿ ನದಿ

ಹಾಸನ: ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹೇಮಾವತಿ ನದಿ ಮೈದುಂಬಿ ಹರಿಯುತ್ತಿದೆ. ಪರಿಣಾಮ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ತೀವ್ರ ಕಂಗಾಲಾಗಿದ್ದಾರೆ.

ರಾಜ್ಯದ ಹಲವೆಡೆ ಮಳೆ ಮುಂದುವರಿದಿದ್ದು, ಭಾರೀ ಮಳೆಯಿಂದ ಹೇಮಾವತಿ ನದಿ ತೀರದ ಜನತೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಅರಕಲಗೂಡು ಹಾಗೂ ಹೊಳೆನರಸೀಪುರದಲ್ಲಿ ಭಾರೀ ಮಳೆಯಿಂದ ರಸ್ತೆಯ ಮಧ್ಯೆಯೇ ನೀರು ಹರಿಯುತ್ತಿದ್ದು, ಹೇಮಾವತಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಪರಿಣಾಮ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಬಿಡಲಾಗಿದ್ದು, ಹೇಮಾವತಿ ನದಿ ತನ್ನ ಎಲ್ಲೆ ಮೀರಿ ಹರಿಯುತ್ತಿದೆ.

ಮೈದುಂಬಿ ಹರಿಯುತ್ತಿರುವ ನದಿಯಿಂದ ರಸ್ತೆ ಸಂಪೂರ್ಣ ಜಲಾವೃತವಾಗಿದ್ದು, ವಾಹನ ಸಂಚಾರಕ್ಕೆ ಅಸ್ತವ್ಯಸ್ತ ಉಂಟಾಗಿದೆ.

ಹೇಮಾವದಿ ನದಿ ಪಾತ್ರದಲ್ಲಿ ವಾಸಿಸುತ್ತಿರುವ ತಗ್ಗು ಪ್ರದೇಶಗಳು ಕೂಡ ಜಲಾವೃತವಾಗಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಇನ್ನು ಜಲಾವೃತವಾದ ಕೆಲ ಬಡಾವಣೆಗಳಿಗೆ ಸಂಸದ ಶ್ರೇಯಸ್‌ ಪಟೇಲ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊಳೆನರಸೀಪುರದಲ್ಲಿ ನದಿ ಆರ್ಭಟಕ್ಕೆ 29 ಮನೆಗಳು ಜಲಾವೃತವಾಗಿದ್ದು, ಮನೆಯ ಸದಸ್ಯರನ್ನು ಕಾಳಜಿ ಕೇಂದ್ರಕ್ಕೆ ಶಿಫ್ಟ್‌ ಮಾಡಲಾಗಿದೆ.

ನದಿ ಪಾತ್ರದ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವ ಜನರು ಯಾವುದೇ ಕಾರಣಕ್ಕೂ ನದಿ ಬಳಿ ತೆರಳದಂತೆ ಸೂಚನೆ ನೀಡಲಾಗಿದ್ದು, ಅಗತ್ಯವಿದ್ದರೆ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆಯುವಂತೆ ಸೂಚನೆ ನೀಡಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

4 hours ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

4 hours ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

4 hours ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

4 hours ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು…

4 hours ago

ಫಾಲ್ಕೆ ಪ್ರಶಸ್ತಿ ಕಲಾಸೇವೆಗೆ ಸಂದ ಗೌರವ: ಅನಂತ್ ನಾಗ್‌

ಸಂದರ್ಶನ: ಬಾನಾಸು  ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…

5 hours ago