Mysore
20
overcast clouds
Light
Dark

ಸಕಲೇಶಪುರಕ್ಕೆ ತೆರಳಲು ಪ್ರವಾಸಿಗರ ಹಿಂದೇಟು: ಪ್ರವಾಸೋದ್ಯಮಕ್ಕೆ ಹೊಡೆತ

ಹಾಸನ: ಹಾಸನ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಸಕಲೇಶಪುರಕ್ಕೆ ತೆರಳಲು ಪ್ರವಾಸಿಗರು ಹಿಂದೇಟು ಹಾಕುತ್ತಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದಲೂ ಭಾರೀ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು, ಹಳ್ಳಕೊಳ್ಳಗಳು ಸಂಪೂರ್ಣ ಜಲಾವೃತವಾಗಿವೆ.

ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಗುಡ್ಡ ಕುಸಿತ, ತಡೆಗೋಡೆಗಳ ಕುಸಿತ, ಸಂಚಾರ ಸ್ಥಗಿತ, ವಿದ್ಯುತ್‌ ಕಡಿದಂತಹ ಹಲವಾರು ಸಮಸ್ಯೆಗಳು ಕಾಣಿಸಿಕೊಂಡಿವೆ. ಪರಿಣಾಮ ಸಕಲೇಶಪುರಕ್ಕೆ ತೆರಳಲು ಪ್ರವಾಸಿಗರು ಹಿಂದೇಟು ಹಾಕುತ್ತಿದ್ದು, ಪ್ರವಾಸೋದ್ಯಮಕ್ಕೆ ಭಾರೀ ಹೊಡೆತ ಬಿದ್ದಿದೆ.

ಸಕಲೇಶಪುರದಲ್ಲಿ 50ಕ್ಕೂ ಹೆಚ್ಚು ರೆಸಾರ್ಟ್‌ಗಳಿದ್ದು, ಪ್ರವಾಸಿಗರಿಲ್ಲದೇ ರೆಸಾರ್ಟ್‌ ಮಾಲೀಕರು ತೀವ್ರ ಕಂಗಾಲಾಗಿದ್ದಾರೆ. ಸಕಲೇಶಪುರದಲ್ಲಿರುವ ಪ್ರವಾಸಿ ತಾಣಗಳಲ್ಲಿ ಸುರಕ್ಷತೆಯಿಲ್ಲ. ಹಾಗಾಗಿ ಇಲ್ಲಿಗೆ ಪ್ರವಾಸಿಗರು ಬರಲು ಹಿಂದೇಟು ಹಾಕುತ್ತಿದ್ದಾರೆ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.

ಈ ಹಿಂದೆ ಎಷ್ಟೇ ಮಳೆ ಇದ್ದರೂ ಈ ಭಾಗದಲ್ಲಿ ಏನೂ ಸಮಸ್ಯೆ ಇರಲಿಲ್ಲ. ಆದರೆ ಈಗ ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುತ್ತಿರುವುದರಿಂದ ರಸ್ತೆಗಳ ಮೇಲೆ ಗುಡ್ಡ ಕುಸಿಯುತ್ತಿವೆ. ಹಾಗಾಗಿ ಭಯದಿಂದಲೇ ಪ್ರವಾಸಿಗರು ಇಲ್ಲಿಗೆ ಬರಲು ಹಿಂದೇಟು ಹಾಕುತ್ತಿದ್ದಾರೆ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.