ಹಾಸನ: ಹಾಸನ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಸಕಲೇಶಪುರಕ್ಕೆ ತೆರಳಲು ಪ್ರವಾಸಿಗರು ಹಿಂದೇಟು ಹಾಕುತ್ತಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದಲೂ ಭಾರೀ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು, ಹಳ್ಳಕೊಳ್ಳಗಳು ಸಂಪೂರ್ಣ ಜಲಾವೃತವಾಗಿವೆ.
ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಗುಡ್ಡ ಕುಸಿತ, ತಡೆಗೋಡೆಗಳ ಕುಸಿತ, ಸಂಚಾರ ಸ್ಥಗಿತ, ವಿದ್ಯುತ್ ಕಡಿದಂತಹ ಹಲವಾರು ಸಮಸ್ಯೆಗಳು ಕಾಣಿಸಿಕೊಂಡಿವೆ. ಪರಿಣಾಮ ಸಕಲೇಶಪುರಕ್ಕೆ ತೆರಳಲು ಪ್ರವಾಸಿಗರು ಹಿಂದೇಟು ಹಾಕುತ್ತಿದ್ದು, ಪ್ರವಾಸೋದ್ಯಮಕ್ಕೆ ಭಾರೀ ಹೊಡೆತ ಬಿದ್ದಿದೆ.
ಸಕಲೇಶಪುರದಲ್ಲಿ 50ಕ್ಕೂ ಹೆಚ್ಚು ರೆಸಾರ್ಟ್‌ಗಳಿದ್ದು, ಪ್ರವಾಸಿಗರಿಲ್ಲದೇ ರೆಸಾರ್ಟ್ ಮಾಲೀಕರು ತೀವ್ರ ಕಂಗಾಲಾಗಿದ್ದಾರೆ. ಸಕಲೇಶಪುರದಲ್ಲಿರುವ ಪ್ರವಾಸಿ ತಾಣಗಳಲ್ಲಿ ಸುರಕ್ಷತೆಯಿಲ್ಲ. ಹಾಗಾಗಿ ಇಲ್ಲಿಗೆ ಪ್ರವಾಸಿಗರು ಬರಲು ಹಿಂದೇಟು ಹಾಕುತ್ತಿದ್ದಾರೆ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.
ಈ ಹಿಂದೆ ಎಷ್ಟೇ ಮಳೆ ಇದ್ದರೂ ಈ ಭಾಗದಲ್ಲಿ ಏನೂ ಸಮಸ್ಯೆ ಇರಲಿಲ್ಲ. ಆದರೆ ಈಗ ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುತ್ತಿರುವುದರಿಂದ ರಸ್ತೆಗಳ ಮೇಲೆ ಗುಡ್ಡ ಕುಸಿಯುತ್ತಿವೆ. ಹಾಗಾಗಿ ಭಯದಿಂದಲೇ ಪ್ರವಾಸಿಗರು ಇಲ್ಲಿಗೆ ಬರಲು ಹಿಂದೇಟು ಹಾಕುತ್ತಿದ್ದಾರೆ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…