ಹಾಸನ: ಜಿಲ್ಲೆಯ ಮಲೆನಾಡಿನ ಭಾಗ ಹಾಗೂ ಚಿಕ್ಕಮಗಳೂರು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ.
ಜಲಾಶಯದ ಸದ್ಯ 32,087 ಕ್ಯೂಸೆಕ್ಸ್ ನೀರು ಹರಿದುಬರುತ್ತಿದ್ದು, ಆರು ಕ್ರಸ್ಟ್ ಗೇಟ್‌ಗಳ ಮೂಲಕ ನೀರನ್ನು ಬಿಡುಗಡೆ ಮಾಡಲಾಗಿದ್ದು, ಜಲಾಶಯದ ಹೊರಹರಿವು 32,925 ಕ್ಯೂಸೆಕ್ಸ್‌ಗಳಾಗಿದೆ.
ಜಲಾಶಯದ ಗರಿಷ್ಠ ನೀರಿನ ಮಟ್ಟ 2922.00 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 2921.90 ಅಡಿಗಳಾಗಿದೆ. ಜಲಾಶಯದ ಇಂದಿನ ಒಳಹರಿವು 32,087 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 32,925 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ನೀರಿನ ಸಂಗ್ರಹ ಸಾಮರ್ಥ್ಯ 37.103 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 37.006 ಟಿಎಂಸಿಗಳಾಗಿದೆ.





