Mysore
29
overcast clouds

Social Media

ಬುಧವಾರ, 17 ಜೂನ್ 2026
Light
Dark

ಹಾಸನ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆ: ಎಕರೆಗಟ್ಟಲೇ ಬಾಳೆ ಬೆಳೆ ನಾಶ

ಹಾಸನ: ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಭಾರೀ ಮಳೆಗೆ ಲಕ್ಷಾಂತರ ರೂ ಮೌಲ್ಯದ ಬಾಳೆ ಬೆಳೆ ನಾಶವಾಗಿದೆ.

ಅರಕಲಗೂಡು ತಾಲ್ಲೂಕಿನ ಬಸವನಹಳ್ಳಿಕೊಪ್ಪಲು ಗ್ರಾಮದಲ್ಲಿ ಲೋಕೇಶ್‌, ಪರಮೇಶ್‌, ನಾಗರಾಜ್‌ ಎಂಬುವವರಿಗೆ ಸೇರಿದ ಸಾವಿರಾರು ಬಾಳೆ ಗಿಡಗಳು ನಾಶವಾಗಿವೆ.

ಕಟಾವಿಗೆ ಬಂದಿದ್ದ ಅಪಾರ ಪ್ರಮಾಣದ ಬೆಳೆ ಕಳೆದುಕೊಂಡು ರೈತರು ಕಂಗಾಲಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಇದೇ ಗ್ರಾಮದ ಕೆಲ ರೈತರು ಬೆಳೆದಿದ್ದ ಮೆಕ್ಕೆಜೋಳ ಕೂಡ ನೆಲಕಚ್ಚಿದ್ದು, ಎರಡು ವಾಸದ ಮನೆಗಳ ಹಂಚುಗಳು ಹಾರಿ ಹೋಗಿವೆ. ಇಷ್ಟಾದರೂ ಗ್ರಾಮಕ್ಕೆ ಯಾವುದೇ ಅಧಿಕಾರಿಗಳು ಭೇಟಿ ನೀಡಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Tags:
error: Content is protected !!